Select Your Language

Notifications

webdunia
webdunia
webdunia
webdunia

ಮಧ್ಯಪ್ರದೇಶ ಗೋಲಿಬಾರ್: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಮಧ್ಯಪ್ರದೇಶ ಗೋಲಿಬಾರ್: ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ನವದೆಹಲಿ , ಬುಧವಾರ, 7 ಜೂನ್ 2017 (17:03 IST)
ಮಧ್ಯಪ್ರದೇಶದಲ್ಲಿ ಪೊಲೀಸರ ಗುಂಡಿಗೆ ಆರು ರೈತರ ಬಲಿಯಾಗಿ ನೂರಾರು ರೈತರ ಗಾಯಗೊಂಡಿದ್ದರೂ ಪ್ರಧಾನಿ ಮೋದಿ ಚಕಾರವೆತ್ತುತ್ತಿಲ್ಲ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
 
ರೈತರು ಸಾಲ ಮನ್ನಾ ಮತ್ತು ಈರುಳ್ಳಿಗೆ ಬೆಂಬಲ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಗೆ ಸ್ಪಂದಿಸದ ಸರಕಾರ ರೈತರ ಮೇಲೆ ದೌರ್ಜನ್ಯವೆಸಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಘ್ವಿ ಕಿಡಿಕಾರಿದ್ದಾರೆ.
 
ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರಗಳು ರೈತ ವಿರೋಧಿಯಾಗಿವೆ. ರೈತರಿಗೆ ಅಗತ್ಯವಾದ ಮೂಲಸೌಕರ್ಯಗಳನ್ನು ನೀಡಲು ಕೂಡಾ ವಿಫಲವಾಗಿವೆ ಎಂದು ಆರೋಪಿಸಿದರು.
 
ಪ್ರಧಾನಿ ಮೋದಿ ಮಂದ್ಸೌರ್ ಘಟನೆಯ ಬಗ್ಗೆ ಒಂದೇ ಒಂದು ಹೇಳಿಕೆ ನೀಡಿಲ್ಲ. ರೈತರ ಸಮಸ್ಯೆಗಳಿಗೆ ಸ್ಪಂದಿಸದಿರುವುದೇ ರೈತರು ಬೀದಿಗಿಳಿದಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಘ್ವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮಲ್ಲಿಕಾರ್ಜುನ್ ಖರ್ಗೆ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ