Webdunia - Bharat's app for daily news and videos

Install App

ನೇಣು ಬಿಗಿದುಕೊಂಡು ನ್ಯಾಯಾಧೀಶ ಆತ್ಮಹತ್ಯೆ

Webdunia
ಬುಧವಾರ, 9 ನವೆಂಬರ್ 2016 (16:43 IST)
ಮದ್ಯ ಸೇವಿಸಿ ಆಟೋ ಚಾಲಕ ಮತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಆರೋಪವನ್ನೆದುರಿಸುತ್ತಿದ್ದ ಕೇರಳದ ಕಾಸರಗೋಡು ಜ್ಯುಡಿಶಿಯಲ್ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ವಿ.ಕೆ. ಉಣ್ಣಿಕೃಷ್ಣನ್ (45) ಬುಧವಾರ ಮುಂಜಾನೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
 
ಕೇರಳದ ತ್ರಿಶ್ಯೂರ್ ನಿವಾಸಿಯಾಗಿದ್ದ ಕೃಷ್ಣನ್ ಇಂದು ಬೆಳಿಗ್ಗೆ 10 ರ ಸುಮಾರಿಗೆ ಕಾಸರಗೋಡು ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಬಳಿ ಇರುವ ನ್ಯಾಯಾಧೀಶರ ವಸತಿಗೃಹದಲ್ಲಿ ಸಾವಿಗೆ ಶರಣಾಗಿದ್ದಾರೆ. ಹೊರಗೆ ಹೋಗಿದ್ದ ಮನೆಗೆಲಸದ ಸಿಬ್ಬಂದಿ ಮರಳಿ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.
 
ಕಳೆದ ಭಾನುವಾರ ಸುಳ್ಯದಲ್ಲಿ ಆಟೋಚಾಲಕ ಮತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ಅವರ ಮೇಲೆ ಪ್ರಕರಣ ದಾಖಲಾಗಿತ್ತು. ಘಟನೆಯ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಅವರು ಮಂಗಳವಾರ ಸಂಜೆಯಷ್ಟೇ ಮನೆಗೆ ಮರಳಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments