Select Your Language

Notifications

webdunia
webdunia
webdunia
webdunia

ಮಹಾರಾಷ್ಟ್ರದ ಕೃಷಿ ಸಚಿವ, ಬಿಜೆಪಿ ಹಿರಿಯ ನಾಯಕ ಪಾಂಡುರಂಗ ಫುಂಡ್ಕರ್‌ ಇನ್ನಿಲ್ಲ!

ಮಹಾರಾಷ್ಟ್ರದ ಕೃಷಿ ಸಚಿವ, ಬಿಜೆಪಿ ಹಿರಿಯ ನಾಯಕ ಪಾಂಡುರಂಗ ಫುಂಡ್ಕರ್‌ ಇನ್ನಿಲ್ಲ!
ಮಹಾರಾಷ್ಟ್ರ , ಗುರುವಾರ, 31 ಮೇ 2018 (11:46 IST)
ಮಹಾರಾಷ್ಟ್ರ : ಮಹಾರಾಷ್ಟ್ರದ ಕೃಷಿ ಸಚಿವ, ಬಿಜೆಪಿ ಹಿರಿಯ ನಾಯಕ ಪಾಂಡುರಂಗ ಫುಂಡ್ಕರ್‌ ಅವರು ಹೃದಯಾಘಾತದಿಂದ ಗುರುವಾರ (ಇಂದು) ಬೆಳಗಿನ ಜಾವ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.


ಇತ್ತೀಚೆಗೆ ಸಚಿವ ಪಾಂಡುರಂಗ (67) ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಇಂದು ಬೆಳಿಗ್ಗೆ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಯಲ್ಲೇ ಸಾವನಪ್ಪಿದ್ದಾರೆ. ಇವರು ಮೂರು ಬಾರಿ ಲೋಕಸಭಾ ಸದಸ್ಯರಾಗಿ, ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಅವರು ಸೇವೆ ಸಲ್ಲಿಸಿದ್ದರು. ಅಷ್ಟೇ ಅಲ್ಲ, ಬಿಜೆಪಿ ರಾಜ್ಯಾಧ್ಯಕ್ಷರಾಗಿಯೂ ಪಾಂಡುರಂಗ ಕಾರ್ಯ ನಿರ್ವಹಿಸಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಆರ್ ಆರ್ ನಗರದಲ್ಲಿ ಬಿಜೆಪಿ ಗೆಲ್ಲಬಾರದು ಎಂದಷ್ಟೇ ನಮ್ಮ ಗುರಿಯಾಗಿತ್ತು: ಸಿಎಂ ಎಚ್ ಡಿಕೆ