Select Your Language

Notifications

webdunia
webdunia
webdunia
webdunia

ಭವಿಷ್ಯದಲ್ಲಿ ಅಧಿಕಾರಿಗಳಬೇಕಿದ್ದವರ ಕಳ್ಳಾಟ ಪರೀಕ್ಷೆಯಲ್ಲಿ ಬಯಲು, Video

Maharashtra Student Exam Cheating video
Photo Credit X
ಮಹಾರಾಷ್ಟ್ರದ ಚಂದ್ರಾಪುರದಲ್ಲಿ ಆಘಾತಕಾರಿ ಘಟನೆ ವರದಿಯಾಗಿದ್ದು, ಬಿ.ಎ. ಸಿವಿಲ್ ಸರ್ವೀಸ್ ವಿದ್ಯಾರ್ಥಿಗಳು ಮೊಬೈಲ್ ಫೋನ್ ಬಳಸಿ ಪರೀಕ್ಷೆಯಲ್ಲಿ ನಕಲು ಮಾಡುತ್ತಿರುವುದು ಕಂಡುಬಂದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಕವಿಕುಲಗುರು ಕಾಳಿದಾಸ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾಗಿರುವ ಮುಲ್‌ನಲ್ಲಿರುವ ಸರ್ವೋದಯ ಕಾಲೇಜಿನಲ್ಲಿ ಏಪ್ರಿಲ್ 22 ರಂದು ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.

ಮೊಬೈಲ್ ಬಳಸಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ₹300 ಪಡೆಯಲಾಗಿದೆ ಎಂಬ ಆರೋಪ ಕೇಳಿಬಂದಿದೆ. ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಪರೀಕ್ಷಾ ಕೇಂದ್ರದಲ್ಲಿರುವ ವಿದ್ಯಾರ್ಥಿಗಳು ನಿರ್ಭೀತಿಯಿಂದ ಕೈಯಲ್ಲಿ ಮೊಬೈಲ್ ಹಿಡಿದುಕೊಂಡು ತಮ್ಮ ಪತ್ರಿಕೆಗಳನ್ನು ಬರೆಯಲು ಗೂಗಲ್‌ನಲ್ಲಿ ಉತ್ತರಗಳನ್ನು ಹುಡುಕುತ್ತಿರುವುದನ್ನು ವೀಡಿಯೊ ಸ್ಪಷ್ಟವಾಗಿ ತೋರಿಸುತ್ತದೆ.

ಇನ್ನೂ ಈ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದು,  ಬಿಎ ಸಿವಿಲ್ ಪರೀಕ್ಷೆ ಬರೆದು ಭವಿಷ್ಯದಲ್ಲಿ ಆಡಳಿತಾಧಿಕಾರಿಗಳಾಗುವ ಕನಸು ಹೊತ್ತಿರುವ ವಿದ್ಯಾರ್ಥಿಗಳು ಭ್ರಷ್ಟಾಚಾರ, ವಂಚನೆಗೆ ಬುನಾದಿ ಕಟ್ಟುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.



Share this Story:

Follow Webdunia kannada

ಮುಂದಿನ ಸುದ್ದಿ

Karnataka Weather: ಮಳೆಗಾಗಿ ಕಾಯುತ್ತಿದ್ದವರಿಗೆ ಗುಡ್‌ನ್ಯೂಸ್‌, ಈ ಜಿಲ್ಲೆಗಳಲ್ಲಿ ಮುಂದಿನ 7 ದಿನ ಮಳೆ