ಆಸ್ಪತ್ರೆಯ ಆವರಣದಲ್ಲಿ ವಿವಸ್ತ್ರನಾಗಿ ಓಡಾಡಿದ ವೈದ್ಯ

Krishnaveni K
ಭಾನುವಾರ, 10 ಮಾರ್ಚ್ 2024 (14:14 IST)
ಮುಂಬೈ: ಮಹಾರಾಷ್ಟ್ರದ ಸರ್ಕಾರೀ ಆಸ್ಪತ್ರೆಯೊಂದರಲ್ಲಿ ವೈದ್ಯನೊಬ್ಬ ವಿವಸ್ತ್ರನಾಗಿ ಆಸ್ಪತ್ರೆ ಆವರಣದಲ್ಲಿ ಓಡಾಡಿದ ದೃಶ್ಯಗಳು ಸಿಸಿಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿದೆ.

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ  ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಯಾವುದೇ ಬಟ್ಟೆಯಿಲ್ಲದೇ ವೈದ್ಯ ಆಸ್ಪತ್ರೆ ತುಂಬಾ ಓಡಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶೌಚಾಲಯಕ್ಕೆ ತೆರಳುವಾಗ ವೈದ್ಯ ಒಂದು ಬಟ್ಟೆಯನ್ನು ಹಿಡಿದುಕೊಂಡಿರುತ್ತಾನೆ. ಬಳಿಕ ಅದೂ ಇಲ್ಲದೇ ವಿವಸ್ತ್ರನಾಗಿ ಓಡಾಡುತ್ತಾನೆ.

ಘಟನೆ ಬಗ್ಗೆ ತನಿಖೆ ನಡೆಸುವುದಾಗಿ ಜಿಲ್ಲಾ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಮೂಲಗಳ ಪ್ರಕಾರ ವೈದ್ಯ ಮಾದಕ ವಸ್ತು ವ್ಯಸನಿಯಾಗಿದ್ದ. ಮಾದಕ ವಸ್ತು ಸೇವಿಸಿದಾಗ ಈ ರೀತಿ ಮಾನಸಿಕ ಅಸ್ವಸ್ಥನಂತೆ ನಡೆದುಕೊಳ್ಳುತ್ತಾನೆ ಎಂದು ಆಸ್ಪತ್ರೆಯ ಸಿಬ್ಬಂದಿಗಳು ಹೇಳಿದ್ದಾರೆ.

ಇದೀಗ ಘಟನೆ ಬಗ್ಗೆ ದೂರು ದಾಖಲಾಗಿದೆ. ತಪ್ಪಿತಸ್ಥ ವೈದ್ಯನ ವಿರುದ್ಧ ತಕ್ಕ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಾಧಿಕಾರಿಗಳು ಹೇಳಿದ್ದಾರೆ. ಆದರೆ ಜನರ ಆರೋಗ್ಯ ನೋಡಿಕೊಳ್ಳಬೇಕಾದ ವೈದ್ಯರೇ ಈ ರೀತಿ ಆಡಿದರೆ ಉಳಿದವರ ಗತಿಯೇನು?

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಇಲ್ಲಿದೆ ಹವಾಮಾನ ವರದಿ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಮುಂದಿನ ಸುದ್ದಿ