Select Your Language

Notifications

webdunia
webdunia
webdunia
webdunia

ಪೆಟ್ರೋಲ್ ಡೀಸೆಲ್ ಬೆಲೆ ಇಳಿಸಿದ ಮಹಾರಾಷ್ಟ್ರ

ಪೆಟ್ರೋಲ್ ಡೀಸೆಲ್ ಬೆಲೆ ಇಳಿಸಿದ ಮಹಾರಾಷ್ಟ್ರ
ಮುಂಬೈ , ಗುರುವಾರ, 14 ಜುಲೈ 2022 (16:47 IST)
ಮುಂಬೈ : ಮಹಾರಾಷ್ಟ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಪ್ರತಿ ಲೀಟರ್ಗೆ ಕ್ರಮವಾಗಿ 5 ಮತ್ತು 3 ರೂಪಾಯಿಗಳಷ್ಟು ಕಡಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಏಕನಾಥ್ ಶಿಂಧೆ ಹೇಳಿದ್ದಾರೆ.

ಅವರಿಂದು ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ನವೆಂಬರ್ 4 ಮತ್ತು ಮೇ 22 ರಂದು ವ್ಯಾಟ್ ಅನ್ನು ಕಡಿಮೆ ಮಾಡಿತು.

ರಾಜ್ಯಗಳಲ್ಲೂ ತೆರಿಗೆ ಕಡಿತಗೊಳಿಸುವಂತೆ ಸೂಚನೆ ನೀಡಿತು. ಆದರೆ ಈ ಹಿಂದೆ ಇದ್ದ ಮಹಾ ವಿಕಾಸ್ ಸರ್ಕಾರ ಕೇಂದ್ರದ ಸೂಚನೆಯನ್ನು ಅನುಸರಿಸಲಿಲ್ಲ. ನಮ್ಮ ಸರ್ಕಾರ ಪ್ರಸ್ತುತ ಹಣಕಾಸು ಸ್ಥಿತಿಯನ್ನು ಅಧ್ಯಯನ ಮಾಡಿ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಅನ್ನು ಇಳಿಸಲು ಮುಂದಾಗಿದೆ ಎಂದು ಅವರು ಹೇಳಿದ್ದಾರೆ. 

ಪ್ರತಿ ಲೀಟರ್ ಪೆಟ್ರೋಲ್ಗೆ 5 ರೂ. ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲಿನ 3 ರೂ. ವ್ಯಾಟ್ ಅನ್ನು ಕಡಿತಗೊಳಿಸಲು ನಿರ್ಧರಿಸಿದೆ. ಈ ನಿರ್ಧಾರದಿಂದ ರಾಜ್ಯದ ಬೊಕ್ಕಸಕ್ಕೆ 6,000 ಕೋಟಿ ರೂಪಾಯಿ ಹೊರೆ ಬೀಳಲಿದೆ ಎಂದು ತಿಳಿಸಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಪ್ಲಾಸ್ಟಿಕ್ ಕವರ್ ಕೈಯಲ್ಲಿದರೆ ಫೈನ್...!!!