Webdunia - Bharat's app for daily news and videos

Install App

ಮಹಾರಾಷ್ಟ್ರ ಸಿಎಂ ಗದ್ದುಗೆ ಬಿಟ್ಟು ಕೇಂದ್ರದತ್ತ ದೇವೇಂದ್ರ ಫಡ್ನಿವಿಸ್?

Webdunia
ಬುಧವಾರ, 15 ಮಾರ್ಚ್ 2017 (05:51 IST)
ಮುಂಬೈ: ಬಿಜೆಪಿಯಲ್ಲಿ ಈಗ ಭಾರೀ ವಿದ್ಯಮಾನಗಳು ನಡೆಯುತ್ತಿವೆ. ಕೇಂದ್ರ ಸಚಿವರಾಗಿದ್ದ ಮನೋಹರ್ ಪರಿಕ್ಕರ್ ರಾಜೀನಾಮೆ ನೀಡಿ ಗೋವಾ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿದ್ದರೆ, ಅತ್ತ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕೇಂದ್ರಕ್ಕೆ ಪ್ರಮೋಟ್ ಆಗುವ ಸಾಧ್ಯತೆ ದಟ್ಟವಾಗಿದೆ.

 
ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಫಡ್ನವಿಸ್ ಕೇಂದ್ರ ಸರ್ಕಾರಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಸುದ್ದಿ ಹಬ್ಬಿದೆ. ಆದರೆ ಕೇಂದ್ರದಲ್ಲಿ ಅವರ ಸ್ಥಾನವೇನು ಎಂಬುದು ಖಚಿತವಾಗಿಲ್ಲ.

ಇತ್ತೀಚೆಗೆ ನಡೆದ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿನಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದ ಫಡ್ನವಿಸ್ ಗೆ ಕೇಂದ್ರ ಸರ್ಕಾರದ ಸ್ಥಾನ ಮಾನ ನೀಡಲು ಹೈಕಮಾಂಡ್ ತೀರ್ಮಾನಿಸಿದೆ ಎನ್ನಲಾಗಿದೆ. ಫಡ್ನವಿಸ್ ಸ್ಥಾನಕ್ಕೆ ಸದ್ಯಕ್ಕೆ ಮಹಾರಾಷ್ಟ್ರದ ಕಂದಾಯ ಸಚಿವರಾದ ಚಂದ್ರಕಾಂತ್ ಪಾಟೀಲ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮೂಲಗಳು ಹೇಳುತ್ತಿವೆ. ಇದೆಲ್ಲಾ ಎಷ್ಟು ಸತ್ಯ ಎನ್ನುವುದು ಸದ್ಯದಲ್ಲೇ ಗೊತ್ತಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments