Publish Date: Tue, 06 Feb 2018 (17:51 IST)
Updated Date: Tue, 06 Feb 2018 (17:52 IST)
ಮಹಾತ್ಮ ಗಾಂಧಿ ಅವರ ಸ್ವಚ್ಛ ಭಾರತ ಕನಸನ್ನು ನರೇಂದ್ರ ಮೋದಿ ಸರ್ಕಾರ ಮೂರೂವರೆ ವರ್ಷಗಳಲ್ಲಿ ನನಸು ಮಾಡಿದೆ ಎಂದು ಬಿಜೆಪಿ ಸಂಸದ ರಾಕೇಶ್ ಸಿಂಗ್ ಹೇಳಿದ್ದಾರೆ.
ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಆರು ದಶಕಗಳಲ್ಲಿ ಮಾಡದಿರುವುದನ್ನು ನರೇಂದ್ರ ಮೋದಿ ಅವರು ಕೇವಲ ಮೂರೂವರೆ ವರ್ಷಗಳಲ್ಲಿ ಮಾಡಿ ತೋರಿಸಿದ್ದಾರೆ ಎಂದು ಶ್ಲಾಘಿಸಿದ್ದಾರೆ.
ಸ್ವಚ್ಛ ಭಾರತ್ ಯೋಜನೆ ಅಡಿ ಕೇಂದ್ರ ಸರ್ಕಾರ 5.5 ಕೋಟಿ ಶೌಚಾಲಯಗಳನ್ನು ನಿರ್ಮಿಸಿದೆ. ಸಮಾಜದ ಎಲ್ಲ ವರ್ಗದವರಿಗೆ ಹಾಗೂ ಪ್ರತಿ ಧರ್ಮಕ್ಕೂ ಸಮಾನತೆ ನೀಡಲಾಗಿದೆ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.