Publish Date: Thu, 20 Oct 2016 (19:06 IST)
Updated Date: Thu, 20 Oct 2016 (19:11 IST)
ಮಲಯಾಳಂ ಸೂಪರ್ ಸ್ಟಾರ್ ಸುರೇಶ್ ಗೋಪಿ ಬುಧವಾರ ಬಿಜೆಪಿ ಸೇರಿದ್ದಾರೆ. ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಉಪಸ್ಥಿತಿಯಲ್ಲಿ ಅವರು ಕಮಲಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಮಾತನಾಡಿದ ನಖ್ವಿ, ಸುರೇಶ್ ಗೋಪಿ ಸೇರ್ಪಡೆಯಿಂದ ಪಕ್ಷ ರಾಜ್ಯದಲ್ಲಿ ಮತ್ತಷ್ಟು ಬಲಗೊಳ್ಳಲಿದೆ ಎಂದರು.
ರಾಷ್ಟ್ರ ಪ್ರಶಸ್ತಿ ವಿಜೇತ ನಟ ಕಳೆದ ಎಪ್ರಿಲ್ ತಿಂಗಳಲ್ಲಿ ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿದ್ದರು. ಕೇರಳ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಸ್ಟಾರ್ ಪ್ರಚಾರಕರಾಗಿದ್ದರು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ