ಮಾಲೆಗಾಂವ್ ಸ್ಫೋಟ ಪ್ರಕರಣ: ಸೋನಿಯಾ, ರಾಹುಲ್ ಸೇರಿದಂತೆ ಕೈ ನಾಯಕರು ಕ್ಷಮೆಯಾಚಿಸಬೇಕು

Sampriya
ಗುರುವಾರ, 31 ಜುಲೈ 2025 (16:33 IST)
Photo Credit X
ನವದೆಹಲಿ: 2008 ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಎಲ್ಲಾ ಏಳು ಆರೋಪಿಗಳನ್ನು ಖುಲಾಸೆಗೊಳಿಸಿದ ನಂತರ, ಬಿಜೆಪಿ ಗುರುವಾರ "ಇದು ಅತ್ಯಂತ ಐತಿಹಾಸಿಕ ದಿನ" ಎಂದು ಹೇಳಿದೆ. 

ದೇಶದ ಮೇಲೆ "ಹಿಂದೂ ಭಯೋತ್ಪಾದನೆ" ಎಂದೂ ನಿರೂಪಣೆ ಮಾಡಲು ಪಿತೂರಿ ಮಾಡಿದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಈ ವಿಚಾರಚಾಗಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ಬಿಜೆಪಿಯ ಹಿರಿಯ ನಾಯಕ ಮತ್ತು ರಾಷ್ಟ್ರೀಯ ವಕ್ತಾರ ರವಿಶಂಕರ್ ಪ್ರಸಾದ್ ಅವರು ತೀರ್ಪನ್ನು ಶ್ಲಾಘಿಸಿದ್ದಾರೆ, ಇದು "ದೇಶದಾದ್ಯಂತ 'ಕೇಸರಿ ಭಯೋತ್ಪಾದನೆ'ಯ ಎಂದು ನಿರುಪಣೆ ಮಾಡಲು ಪಿತೂರಿಯನ್ನು ನಾಶಪಡಿಸಿದೆ ಎಂದು ಹೇಳಿದರು. 

ಆ ಸಮಯದಲ್ಲಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಮತಬ್ಯಾಂಕ್ ರಾಜಕಾರಣಕ್ಕಾಗಿ ಇದನ್ನು ಹೆಣೆದಿದೆ ಎಂದು ಅವರು ಹೇಳಿದರು.

ಮಹಾರಾಷ್ಟ್ರದ ಮಾಲೆಗಾಂವ್‌ನಲ್ಲಿ ನಡೆದ ಪ್ರಬಲ ಬಾಂಬ್ ಸ್ಫೋಟದಲ್ಲಿ ಆರು ಜನರು ಸಾವನ್ನಪ್ಪಿ ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡ ಸುಮಾರು 17 ವರ್ಷಗಳ ನಂತರ ಬಿಜೆಪಿಯ ಮಾಜಿ ಸಂಸದ ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಶ್ರೀಕಾಂತ್ ಪುರೋಹಿತ್ ಸೇರಿದಂತೆ ಎಲ್ಲಾ ಆರೋಪಿಗಳನ್ನು ಮುಂಬೈನ ವಿಶೇಷ ನ್ಯಾಯಾಲಯವು ಗುರುವಾರ ದೋಷಮುಕ್ತಗೊಳಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೂತನ ರಾಜ್ಯ ಮಾಹಿತಿ ಆಯುಕ್ತರಿಗೆ ಪ್ರಮಾಣ ವಚನ ಬೋಧಿಸಿದ ಥಾವರ್ ಚಂದ್ ಗೆಹ್ಲೋಟ್

ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಡಿ.ಕೆ. ಶಿವಕುಮಾರ್ ಬ್ಲ್ಯಾಕ್‍ಮೇಲ್: ಛಲವಾದಿ ನಾರಾಯಣಸ್ವಾಮಿ

ಪ್ರಚೋದನಕಾರಿ ಭಾಷಣ ಮಾಡಿದ ಕನ್ನೇರಿ ಕಾಡಸಿದ್ಧೇಶ್ವರ ಶ್ರೀಗಳಿಗೆ ಬಿಗ್‌ಶಾಕ್

ನಿಷೇಧ ಆರ್ ಎಸ್ಎಸ್ ಗೆ ಮಾತ್ರನಾ, ಬೇರೆ ಧರ್ಮಕ್ಕೂ ಇದೆಯಾ: ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಚಲಿಸುತ್ತಿದ್ದ ರೈಲ್ವಿನಲ್ಲಿ ಹೆರಿಗೆ ನೋವು, ಪ್ರಯಾಣಿಕನೊಬ್ಬನ ದೈರ್ಯಕ್ಕೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments