ಬಿಜೆಪಿ ಸಂಸದರು ತಳ್ಳಿದ್ದರಿಂದ ನನಗೂ ಮೊಣಕಾಲಿಗೆ ಗಾಯವಾಗಿದೆ: ಮಲ್ಲಿಕಾರ್ಜುನ ಖರ್ಗೆ

Krishnaveni K
ಗುರುವಾರ, 19 ಡಿಸೆಂಬರ್ 2024 (13:31 IST)
ನವದೆಹಲಿ: ಸಂಸತ್ತಿನ ಹೊರಗೆ ಇಂದು ಕಾಂಗ್ರೆಸ್ ಮತ್ತು ಬಿಜೆಪಿ ಸಂಸದರ ನೂಕಾಟ, ತಳ್ಳಾಟ ಭಾರೀ ಚರ್ಚೆಗೆ ಕಾರಣವಾಗಿದೆ. ತಳ್ಳಾಟದಲ್ಲಿ ಕೆಳಕ್ಕೆ ಬಿದ್ದ ಬಿಜೆಪಿ ಸಂಸದ ಪ್ರತಾಪ್ ನನ್ನನ್ನು ರಾಹುಲ್ ಗಾಂಧಿ ತಳ್ಳಿದರು ಎಂದು ಆರೋಪಿಸಿದರೆ, ಇತ್ತ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ಸಂಸದರು ತಳ್ಳಿದ್ದರಿಂದ ನನ್ನ ಮೊಣಕಾಲಿಗೆ ಗಾಯವಾಗಿದೆ ಎಂದಿದ್ದಾರೆ.

ಸಂಸತ್ತಿನ ಪ್ರತಿಭಟನೆಗಳು ಇದುವರೆಗೆ ಬಾಯಿ ಮಾತಿನಲ್ಲೇ ನಡೆಯುತ್ತಿತ್ತು. ಆದರೆ ಈ ಬಾರಿ ಇದು ತಳ್ಳಾಟ-ನೂಕಾಟದ ಮಟ್ಟ ತಲುಪಿದೆ. ಓರ್ವ ಸಂಸದ ತನ್ನ ಮೇಲೆ ಬಿದ್ದಿದ್ದರಿಂದ ಪ್ರತಾಪ್ ಬಿದ್ದು ಹಣೆಗೆ ಗಾಯ ಮಾಡಿಕೊಂಡಿದ್ದಾರೆ. ರಾಹುಲ್ ಗಾಂಧಿ ಓರ್ವ ಸಂಸದನನ್ನು ನನ್ನ ಮೇಲೆ ತಳ್ಳಿದ್ದರಿಂದಲೇ ನಾನು ಬಿದ್ದಿದ್ದು ಎಂದು ಪ್ರತಾಪ್ ಬಳಿಕ ಹೇಳಿಕೆ ನೀಡಿದ್ದಾರೆ.

ಇತ್ತ ರಾಜ್ಯಸಭೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕೂಡಾ ನನಗೂ ತಳ್ಳಾಟದಲ್ಲಿ ಮೊಣಕಾಲಿಗೆ ಗಾಯವಾಗಿದೆ. ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ತಿರುಗೇಟು ಕೊಟ್ಟಿದ್ದಾರೆ. ಮಕರ ದ್ವಾರದ ಬಳಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ. ಈ ವೇಳೆ ಸಮತೋಲನ ತಪ್ಪಿ ನಾನು ಬಿದ್ದಿದ್ದೆ. ಇದರಿಂದ ಈಗಾಗಲೇ ಶಸ್ತ್ರಚಿಕಿತ್ಸೆಗೊಳಗಾಗಿರುವ ಮೊಣಕಾಲಿಗೆ ಗಾಯವಾಗಿದೆ ಎಂದು ಖರ್ಗೆ ಸ್ಪೀಕರ್ ಗೆ ಪತ್ರ ಬರೆದು ದೂರಿದ್ದಾರೆ.

ಅಂತೂ ಇಷ್ಟು ದಿನ ಬಾಯಿ ಮಾತಿನಲ್ಲೇ ರಣರಂಗವಾಗುತ್ತಿದ್ದ ಪಾರ್ಲಿಮೆಂಟ್ ಇಂದು ಗುದ್ದಾಟ-ತಳ್ಳಾಟದ ಮಟ್ಟಕ್ಕೆ ತಲುಪಿದ್ದು ನಾಚಿಕೆಗೇಡಿನ ಸಂಗತಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಮುಂದಿನ ಸುದ್ದಿ
Show comments