Select Your Language

Notifications

webdunia
webdunia
webdunia
webdunia

ಮೋದಿ ಭಯೋತ್ಪಾದಕ ಎಂದು ವಿವಾದವಾಗುತ್ತಿದ್ದಂತೇ ಸಮಜಾಯಿಷಿ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mallikarjun Kharge
ನವದೆಹಲಿ: ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದಿದ್ದಕ್ಕೆ ವಿವಾದವಾಗುತ್ತಿದ್ದಂತೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಹೇಳಿಕೆಗೆ ಸಮಜಾಯಿಷಿ ಕೊಟ್ಟಿದ್ದಾರೆ.

ತಮಿಳುನಾಡು ಚುನಾವಣಾ ಪ್ರಚಾರದ ವೇಳೆ ಎಐಡಿಎಂಕೆ ಜೊತೆಗೆ ಬಿಜೆಪಿ ಮೈತ್ರಿಯನ್ನು ಟೀಕಿಸುವ ಭರದಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಲಿಗೆ ಹರಿಬಿಟ್ಟಿದ್ದರು. ಮೋದಿ ಒಬ್ಬ ಭಯೋತ್ಪಾದಕ. ಅವರ ಜೊತೆ ಎಐಡಿಎಂಕೆ ಯಾಕೆ ಸೇರಿಕೊಂಡಿದೆ ಎಂದು ಪ್ರಶ್ನೆ ಮಾಡಿದ್ದರು.

ಅವರ ಹೇಳಿಕೆಗೆ ರಾಷ್ಟ್ರ ಮಟ್ಟದಲ್ಲಿ ಭಾರೀ ಆಕ್ರೋಶ ಎದುರಾಯಿತು. ಪ್ರಧಾನಿ ಹುದ್ದೆಯಲ್ಲಿರುವ ವ್ಯಕ್ತಿಯನ್ನು ಭಯೋತ್ಪಾದಕ ಎಂದು ಹಿರಿಯ ರಾಜಕಾರಣಿಯೊಬ್ಬರು ಕರೆದಿದ್ದು ಕಾಂಗ್ರೆಸ್ ಮನಸ್ಥಿತಿ ಸೂಚಿಸುತ್ತದೆ. ಇಂತಹ ಹೇಳಿಕೆ ನೀಡಿದ್ದ ಖರ್ಗೆಗೆ ನಾಚಿಕೆಯಾಗಬೇಕು ಎಂದು ಬಿಜೆಪಿ ಭಾರೀ ಆಕ್ರೋಶ ವ್ಯಕ್ತಪಡಿಸಿತ್ತು.

ಇದರ ಬೆನ್ನಲ್ಲೇ ತಮ್ಮ ಹೇಳಿಕೆಗೆ ಖರ್ಗೆ ಸಮಜಾಯಿಷಿ ಕೊಟ್ಟಿದ್ದಾರೆ. ನಾನು ಮೋದಿ ಇಡಿ, ಸಿಬಿಐನಂತಹ ಸಂಸ್ಥೆಗಳನ್ನು ಮುಂದಿಟ್ಟುಕೊಂಡು ವಿಪಕ್ಷಗಳನ್ನು ಬೆದರಿಸುತ್ತಾರೆ ಎಂಬ ಅರ್ಥದಲ್ಲಿ ಹಾಗೆ ಹೇಳಿದ್ದಷ್ಟೇ ಎಂದಿದ್ದಾರೆ. ಅದೇನೇ ಇದ್ದರೂ ಖರ್ಗೆ ಆ ರೀತಿ ಪದ ಬಳಕೆ ಮಾಡಿದ್ದು ಸರಿಯಲ್ಲ ಎಂದು ಬಿಜೆಪಿ ಕಿಡಿ ಕಾರಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇರಾನ್ ಜೊತೆ ಕದನ ವಿರಾಮ ಕೊನೆಗೊಳ್ಳಲು ಕೆಲವೇ ಕ್ಷಣವಿರುವಾಗ ಡೊನಾಲ್ಡ್ ಟ್ರಂಪ್ ಮಹತ್ವದ ನಿರ್ಧಾರ