ನವದೆಹಲಿ: ಇಂದು ದೆಹಲಿಯಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಜರಾಗಲಿದ್ದಾರೆ. ಆದರೆ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಗೈರಾಗಲಿದ್ದಾರೆ.
ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವಿಪಕ್ಷಗಳಿಗೂ ಆಹ್ವಾನ ನೀಡಲಾಗಿದೆ. ಅದರಂತೆ ಮಲ್ಲಿಕಾರ್ಜುನ ಖರ್ಗೆಗೂ ಕರೆ ನೀಡಲಾಗಿದೆ. ಅವರು ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಟಿಎಂಸಿ ನಾಯಕಿ, ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೂ ಕರೆ ನೀಡಲಾಗಿದೆ. ಆದರೆ ಅವರು ಆಹ್ವಾನವನ್ನು ತಿರಸ್ಕರಿಸಿದ್ದಾರೆ. ಮೊದಲಿನಂದಲೂ ಮೋದಿ ಕಡು ವಿರೋಧಿಯಾಗಿದ್ದ ಮಮತಾ ಬ್ಯಾನರ್ಜಿ ಇಂದಿನ ಕಾರ್ಯಕ್ರಮದಲ್ಲಿ ಭಾಗಿಯಾಗದೇ ಇರಲು ತೀರ್ಮಾನಿಸಿದ್ದಾರೆ.
ಇಂದಿನ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಭಾಗಿಯಾಗಲಿದ್ದಾರೆ. ಅಲ್ಲದೆ, ವಿದೇಶೀ ಗಣ್ಯರೂ ಸಾಕ್ಷಿಯಾಗಲಿದ್ದಾರೆ. ಗಣ್ಯಾತಿಗಣ್ಯರು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ.