ನವದೆಹಲಿ: ಎಐಸಿಸಿ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಸಾಧ್ಯತೆಯ ಕುರಿತು ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ ಮತ್ತು ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸುವುದಾಗಿ ಹೇಳಿದ್ದಾರೆ.
ಎಎನ್‌ಐ ಜೊತೆ ಮಾತನಾಡಿದ ಅವರು, ಪಕ್ಷದ ನಾಯಕತ್ವವು ಸಮಸ್ಯೆಯನ್ನು ಪರಿಹರಿಸುತ್ತದೆ ಮತ್ತು ಪರಿಸ್ಥಿತಿಯನ್ನು ಪರಿಗಣಿಸಲು ಮತ್ತು ಅಗತ್ಯವಿರುವ ಯಾವುದೇ ಮಧ್ಯಸ್ಥಿಕೆಯನ್ನು ಒದಗಿಸಲು ನಾನು, ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಭೇಟಿಯಾಗುತ್ತೇವೆ ಎಂದು ಅವರು ಹೇಳಿದರು.
ಈ ವಿಷಯದ ಬಗ್ಗೆ ಯಾವುದೇ ನಿರ್ಧಾರವು ಹೈಕಮಾಂಡ್ ಮಾತ್ರ ನಿರ್ಧರಿಸುತ್ತದೆ ಎಂದು ಸ್ಪಷ್ಟನೆ ನೀಡಿದರು.
ಮುಖ್ಯಮಂತ್ರಿ ಬದಲಾವಣೆ ಸಾಧ್ಯತೆಯ ಊಹಾಪೋಹಗಳ ನಡುವೆ ಇತ್ತೀಚಿನ ವಾರಗಳಲ್ಲಿ ಆಡಳಿತ ಪಕ್ಷದೊಳಗಿನ ಆಂತರಿಕ ಕಚ್ಚಾಟ ಜೋರಾಗಿದೆ.
ನವೆಂಬರ್ 20 ರಂದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಎರಡೂವರೆ ವರ್ಷವನ್ನು ಪೂರೈಸಿದೆ. ಈ ಹಿನ್ನೆಲೆ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮಧ್ಯೆ ಭಾರೀ ಪೈಪೋಟೊ ನಡೆಯುತ್ತಿದೆ.