Publish Date: Thu, 01 Sep 2022 (09:46 IST)
Updated Date: Thu, 01 Sep 2022 (10:47 IST)
ಕೋಲ್ಕತ್ತಾ : ಅಕ್ರಮ ಆಸ್ತಿ ಸಂಬಂಧಿಸಿದಂತೆ ಕೇಂದ್ರ ತನಿಖಾ ತಂಡದಿಂದ ನನಗೆ ಅಥವಾ ನನ್ನ ಕುಟುಂಬ ಸದಸ್ಯರಿಗೆ ನೋಟಿಸ್ ನೀಡಿದರೆ, ನಾನು ಕಾನೂನು ಹೋರಾಟಕ್ಕೆ ಮುಂದಾಗುತ್ತೇನೆ.
ನಮ್ಮ ಬಳಿ ಅಕ್ರಮ ಆಸ್ತಿ ಪತ್ತೆಯಾದರೆ ಬುಲ್ಡೋಜರ್ ನುಗ್ಗಿಸಿ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರಿ ಅಧಿಕಾರಿಗಳಿಗೆ ಸವಾಲು ಹಾಕಿದ್ದಾರೆ.
ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ತಂಡ ಮಮತಾ ಬ್ಯಾನರ್ಜಿಯ ಸೋದರಳಿಯ ಮತ್ತು ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿಗೆ ಸಮನ್ಸ್ ನೀಡಿತ್ತು.
ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಅಕ್ರಮ ಆಸ್ತಿ ಸಂಬಂಧ ಸಮನ್ಸ್ ನೀಡಿರುವುದು ನನ್ನ ಗಮನಕ್ಕೆ ಬಂದಿದೆ.