Select Your Language

Notifications

webdunia
webdunia
webdunia
webdunia

ಮೇ 27 ರಂದು ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಪ್ರಮಾಣ ವಚನ

ತೃಣಮೂಲ ಕಾಂಗ್ರೆಸ್
ಕೋಲ್ಕತಾ , ಶುಕ್ರವಾರ, 20 ಮೇ 2016 (15:06 IST)
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕರು ಅಧಿಕೃತವಾಗಿ ಮಮತಾ ಬ್ಯಾನರ್ಜಿಯವರನ್ನು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಿದ್ದರಿಂದ ಮಮತಾ ಮೇ 27 ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. 
 
ಪಶ್ಚಿಮ ಬಂಗಾಳದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಪಕ್ಷ, ಎಡಪಕ್ಷಗಳು ಮತ್ತು ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿ ಭಾರಿ ಬಹುಮತಗಳ ಅಂತರದಿಂದ ಜಯಗಳಿಸಿದೆ.  
 
294 ಸೀಟುಗಳ ಬಲದ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಪಕ್ಷ 211 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ ಮತ್ತು ಎಡಪಕ್ಷಗಳ ಮೈತ್ರಿಕೂಟ 76 ಸ್ಥಾನಗಳಲ್ಲಿ ಮಾತ್ರ ಜಯಗಳಿಸಿತ್ತು. 
 
ಗಮನಾರ್ಹ ವಿಷಯವೆಂದರೆ, ಕಳೆದ 2011ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೈತ್ರಿಯೊಂದಿಗೆ 184 ಸೀಟುಗಳನ್ನು ಗೆದ್ದಿದ್ದ ಟಿಎಂಸಿ, ಇದೀಗ ಕಾಂಗ್ರೆಸ್ ವಿರೋಧಿ ಅಲೆಯಲ್ಲಿ 211 ಸ್ಥಾನಗಳಲ್ಲಿ ಜಯಗಳಿಸಿದೆ. 
 
ಕಾಂಗ್ರೆಸ್ ಪಕ್ಷ 44 ಸ್ಥಾನಗಳಲ್ಲಿ ಜಯಗಳಿಸಿದ್ದರೆ, ಎಡಪಕ್ಷಗಳು 26 ಸ್ಥಾನಗಳಲ್ಲಿ ಮಾತ್ರ ಜಯಗಳಿಸಿವೆ. ಆರ್‌ಎಸ್‌ಪಿ ಪಕ್ಷ 3, ಸಿಪಿಐ 1 ಮತ್ತು ಫಾರ್ವರ್ಡ್ ಬ್ಲಾಕ್ 2 ಸ್ಥಾನಗಳಲ್ಲಿ ಜಯಗಳಿಸಿದೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಗ್ರಾಮೀಣ ವಿಶ್ವವಿದ್ಯಾಲಯ ಸುಗ್ರೀವಾಜ್ಞೆ: ರಾಜ್ಯಪಾಲರನ್ನು ಭೇಟಿಯಾದ ಸಚಿವ ಪಾಟೀಲ್