ಕೋಲ್ಕತ್ತಾ : ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಕೆಟ್ಟ ಸಂಘಟನೆ ಎಂದು ನಾನು ಭಾವಿಸುವುದಿಲ್ಲವೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೃದು ಧೋರಣೆ ತೋರಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರ್ಎಸ್ಎಸ್ ಕೆಟ್ಟ ಸಂಘಟನೆ ಎಂದು ನಾನು ಭಾವಿಸುವುದಿಲ್ಲ. ಈಗ ಸಂಘಟನೆಯಲ್ಲಿರುವವರು ಬಿಜೆಪಿಯವರಂತೆ ಯೋಚಿಸದ ಕೆಲವರು ಇದ್ದಾರೆ.
ಒಂದಲ್ಲ ಒಂದು ದಿನ ಅವರ ಈ ತಾಳ್ಮೆ ಕಳೆದುಕೊಳ್ಳುವುದು ಖಂಡಿತ. ಆರ್ಎಸ್ಎಸ್ನಲ್ಲಿರುವ ಎಲ್ಲರೂ ಕೆಟ್ಟವರಲ್ಲ. ಬಿಜೆಪಿಯನ್ನು ವಿರೋಧಿಸುವ ಕೆಲವರು, ಒಳ್ಳೆಯವರೂ ಆಗಿದ್ದಾರೆ. ಅವರು ಶೀಘ್ರದಲ್ಲೇ ಹೊರಬರುತ್ತಾರೆ. ಆರ್ಎಸ್ಎಸ್ನವರು ಕೂಡ ಶೀಘ್ರದಲ್ಲೇ ಬಿಜೆಪಿಯನ್ನು ವಿರೋಧಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
ತೃಣಮೂಲ ಕಾಂಗ್ರೆಸ್ನ ಹೆಸರು ಕೆಡಿಸುವ ಪ್ರಯತ್ನವನ್ನು ಯಾರೂ ಮಾಡಬಾರದು, ಹಾಗೇನದರೂ ಮಾಡಿದರೆ, ಯಾರನ್ನೂ ಸುಮ್ಮನೆ ಬಿಡುವುದಿಲ್ಲ.