Select Your Language

Notifications

webdunia
webdunia
webdunia
webdunia

ಮಮತಾ ಸರ್ಕಾರಕ್ಕೆ ಭಾರೀ ಮೊತ್ತದ ದಂಡ!

ಮಮತಾ ಸರ್ಕಾರಕ್ಕೆ ಭಾರೀ ಮೊತ್ತದ ದಂಡ!
ಕೋಲ್ಕತ್ತಾ , ಭಾನುವಾರ, 4 ಸೆಪ್ಟಂಬರ್ 2022 (10:17 IST)
ಕೋಲ್ಕತ್ತಾ : ಘನ ಹಾಗೂ ದ್ರವ ತ್ಯಾಜ್ಯದ ಉತ್ಪಾದನೆ ಹಾಗೂ ಸಂಸ್ಕರಣೆಯನ್ನು ಸೂಕ್ತವಾಗಿ ನಿರ್ವಹಣೆ ಮಾಡದೇ ಇರುವುದರಿಂದ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ 3,500 ಕೋಟಿ ರೂ. ದಂಡ ವಿಧಿಸಿದೆ.

2022-23ರ ಬಜೆಟ್ ಪ್ರಕಾರ ನಗರಾಭಿವೃದ್ಧಿ ಹಾಗೂ ಪುರಸಭೆಗಳ ವ್ಯವಹಾರದ ಭಾಗವಾಗಿ 12,818 ಕೋಟಿ ಅನುದಾನವಿದ್ದರೂ ರಾಜ್ಯ ಸರ್ಕಾರ ಒಳಚರಂಡಿ ಹಾಗೂ ಘನತ್ಯಾಜ್ಯ ನಿರ್ವಹಣೆಗೆ ಸೌಲಭ್ಯಗಳನ್ನು ಕಲ್ಪಿಸಲು ಆದ್ಯತೆ ನೀಡುತ್ತಿಲ್ಲ ಎಂದು ಹಸಿರು ನ್ಯಾಯಪೀಠ ಹೇಳಿದೆ.

ಭವಿಷ್ಯದಲ್ಲಿ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ಗಮನಿಸಿ ಎನ್ಜಿಟಿ ಅಧ್ಯಕ್ಷ ನ್ಯಾಯಮೂತಿ ಎ.ಕೆ.ಗೋಯೆಲ್ ನೇತೃತ್ವದ ಪೀಠವು ಜನರಿಗಾಗಿ ಮಾಲಿನ್ಯ ಮುಕ್ತ ವಾತಾವರಣ ಕಲ್ಪಿಸುವುದು ಸರ್ಕಾರದ ಸಾಂವಿಧಾನಿಕ ಜವಾಬ್ದಾರಿಯಾಗಿದೆ ಎಂಬುದನ್ನು ಒತ್ತಿ ಹೇಳಿದೆ. 

ನಗರ ಪ್ರದೇಶಗಳಲ್ಲಿ ದಿನಕ್ಕೆ 2,758 ಮಿಲಿಯನ್ ಲೀಟರ್ ಕೊಳಚೆ ಉತ್ಪಾದನೆಯಾಗುತ್ತಿದೆ. ಈ ಪೈಕಿ 1,505 ಮಿಲಿಯನ್ ಲೀಟರ್ನಷ್ಟು ಕೊಳಚೆ ಸಂಸ್ಕರಿಸುವ ಸಾಮರ್ಥ್ಯವಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಚಾರಣೆ ನಡೆಸಲು ನಿರಾಕರಿಸಿದ ಸುಪ್ರೀಂಕೋರ್ಟ್