ನವದೆಹಲಿ : 100ಕ್ಕೂ ಹೆಚ್ಚು ಮಹಿಳೆಯರ ಚಿತ್ರಗಳನ್ನು ಮಾರ್ಫಿಂಗ್ ಮಾಡಿ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ದೆಹಲಿ ಪೊಲೀಸರು 26 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಆರೋಪಿ ಸೋಶಿಯಲ್ ಮೀಡಿಯಾದಲ್ಲಿ ಮಹಿಳೆಯರ ಖಾತೆಗಳಿಂದ ಪ್ರೊಫೈಲ್ ಚಿತ್ರಗಳನ್ನು ಡೌನ್ ಲೋಡ್ ಮಾಡಿ ಮಾರ್ಫ್ ಮಾಡುತ್ತಿದ್ದನು. ಬಳಿಕ ಮಹಿಳೆಯರಿಗೆ ಕಳುಹಿಸಿ ಹಣ ನೀಡುವಂತೆ ಒತ್ತಾಯಿಸಿ, ಹಣ ನೀಡದಿದ್ದರೆ ಆ ಫೋಟೊಗಳನ್ನು ಆನ್ ಲೈನ್ ನಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.
ಈ ಬಗ್ಗೆ ಸಂತ್ರಸ್ತ ಮಹಿಳೆಯಲ್ಲೊಬ್ಬರು ಪೊಲೀಸರಿಗೆ ದೂರು ನಿಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.