Publish Date: Wed, 29 Aug 2018 (09:01 IST)
Updated Date: Wed, 29 Aug 2018 (09:02 IST)
ನವದೆಹಲಿ: ಶಾಲಾ ಬಾಲಕಿಯೊಬ್ಬಳನ್ನು ರಸ್ತೆಯಲ್ಲೇ ಎಳೆದಾಡಿ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ.
ಬಿಹಾರದಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. ಈ ಸಂಬಂಧ ವಿಡಿಯೋ ಮಾಡಿದ 20 ವರ್ಷದ ಯುವಕ ಪಂಕಜ್ ಯಾದವ್ ನನ್ನು ಬಂಧಿಸಿದ್ದು ಮತ್ತು ವಿಡಿಯೋದಲ್ಲಿ ಬಾಲಕಿಗೆ ಕಿರುಕುಳ ನೀಡಿದ್ದ ಏಳು ಮಂದಿ ಯುವಕರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ವಿಡಿಯೋ ಮಾಡಿದ್ದ ಪಂಕಜ್ ಯಾದವ್ ಇದೀಗ ತಪ್ಪೊಪ್ಪಿಕೊಂಡಿದ್ದು, ಆತನ ಜತೆಗಿದ್ದ ಆರು ಮಂದಿ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.