Select Your Language

Notifications

webdunia
webdunia
webdunia
webdunia

ಅತ್ಯಾಚಾರವೆಸಗಿ ವಿಡಿಯೋ ಮಾಡಿ ಬೆದರಿಕೆ ಮಾಡುತ್ತಿದ್ದ ಆರೋಪಿ ಅರೆಸ್ಟ್

ಅತ್ಯಾಚಾರವೆಸಗಿ ವಿಡಿಯೋ ಮಾಡಿ ಬೆದರಿಕೆ ಮಾಡುತ್ತಿದ್ದ ಆರೋಪಿ ಅರೆಸ್ಟ್
ಪಾಟ್ನಾ , ಬುಧವಾರ, 30 ಮಾರ್ಚ್ 2022 (11:48 IST)
ಪಾಟ್ನಾ: ಯುವತಿಯ ಮೇಲೆ ಅತ್ಯಾಚಾರವೆಸಗಿ ವಿಡಿಯೋ ಮಾಡಿಕೊಂಡು ಬೆದರಿಕೆ ಹಾಕುತ್ತಿದ್ದ ಆರೋಪಿಯನ್ನು ಬಿಹಾರದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಲಾಕ್ ಡೌನ್ ವೇಳೆ ಯುವತಿಯನ್ನು ಗನ್ ತೋರಿಸಿ ಬೆದರಿಸಿ ಆರೋಪಿ ಆತ್ಯಾಚಾರವೆಸಗಿದ್ದ. ಅಲ್ಲದೆ ಆ ಕೃತ್ಯವನ್ನು ವಿಡಿಯೋ ಮಾಡಿಟ್ಟುಕೊಂಡಿದ್ದ.

ಬಳಿಕ ತನಗೆ ಸಹಕರಿಸದೇ ಇದ್ದರೆ ಆನ್ ಲೈನ್ ನಲ್ಲಿ ಲೀಕ್ ಮಾಡುವುದಾಗಿ ಬೆದರಿಕೆ ಹಾಕಿ ಪದೇ ಪದೇ ದೌರ್ಜನ್ಯವೆಸಗಿದ್ದ. ಕಿರುಕುಳ ತಾಳಲಾರದೇ ಯುವತಿ ಪೊಲೀಸರಿಗೆ ದೂರು ನೀಡಿದ್ದಳು. ಇದೀಗ ಆರೋಪಿಯ ಬಂಧನವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮನೆ ಬಿಟ್ಟು ಹೋಗಿದ್ದ ಪತ್ನಿಯನ್ನು ಕೊಲೆ ಮಾಡಿದ ಪತಿ