Select Your Language

Notifications

webdunia
webdunia
webdunia
webdunia

ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್‌

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ

Sampriya

ದೆಹಲಿ , ಶನಿವಾರ, 7 ಜೂನ್ 2025 (18:18 IST)
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ದೆಹಲಿ ಪೊಲೀಸರ ವಾಯುವ್ಯ ಜಿಲ್ಲಾ ವಿಶೇಷ ಸಿಬ್ಬಂದಿ ಗಾಜಿಯಾಬಾದ್‌ನ ವ್ಯಕ್ತಿಯನ್ನು ಅರೆಸ್ಟ್‌ ಮಾಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಮದ್ಯದ ಅಮಲಿನಲ್ಲಿದ್ದ ಆರೋಪಿ ಮೊದಲು ಪತ್ನಿ ಕರೆ ಮಾಡಿ, ನಂತರ ಮುಖ್ಯಮಂತ್ರಿಗೆ ಬೆದರಿಕೆ ಹಾಕಿದ್ದಾನೆ. ಕಾನೂನು ಪದವೀಧರನಾಗಿರುವ ವ್ಯಕ್ತಿ, ಪತ್ನಿಯಿಂದ ದೂರವಾದ ಬಳಿಕ ಮಾನಸಿಕವಾಗಿ ಸಮಸ್ಯೆಯಲ್ಲಿದ್ದಾನೆ. 

ತನಿಖೆಯ ಸಮಯದಲ್ಲಿ, ಆ ವ್ಯಕ್ತಿ ಪೊಲೀಸರನ್ನು ದಾರಿ ತಪ್ಪಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅವರ ಬಳಿ ನಕಲಿ ಗುರುತಿನ ಚೀಟಿಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಅವರನ್ನು ಮತ್ತಷ್ಟು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆದರಿಕೆ ಬಗ್ಗೆ ಗಾಜಿಯಾಬಾದ್ ಪೊಲೀಸರಿಂದ ಎಚ್ಚರಿಕೆ ಪಡೆದ ನಂತರ ಜೂನ್ 6 ರಂದು ದೆಹಲಿ ಪೊಲೀಸರು ತನಿಖೆ ಆರಂಭಿಸಿದರು. ಜೂನ್ 5 ರ ತಡರಾತ್ರಿ, ಗಾಜಿಯಾಬಾದ್ ಪೊಲೀಸರಿಗೆ ದೆಹಲಿ ಮುಖ್ಯಮಂತ್ರಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿತ್ತು ಎಂದು ಅವರು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

Siddaramaiah: ಬಕ್ರೀದ್ ಆಚರಣೆಯಿಂದ ದೂರ ಉಳಿದ ಸಿದ್ದರಾಮಯ್ಯ: ಚಿನ್ನಸ್ವಾಮಿ ಇಫೆಕ್ಟ್