ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್‌

Sampriya
ಶನಿವಾರ, 7 ಜೂನ್ 2025 (18:18 IST)
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ದೆಹಲಿ ಪೊಲೀಸರ ವಾಯುವ್ಯ ಜಿಲ್ಲಾ ವಿಶೇಷ ಸಿಬ್ಬಂದಿ ಗಾಜಿಯಾಬಾದ್‌ನ ವ್ಯಕ್ತಿಯನ್ನು ಅರೆಸ್ಟ್‌ ಮಾಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಮದ್ಯದ ಅಮಲಿನಲ್ಲಿದ್ದ ಆರೋಪಿ ಮೊದಲು ಪತ್ನಿ ಕರೆ ಮಾಡಿ, ನಂತರ ಮುಖ್ಯಮಂತ್ರಿಗೆ ಬೆದರಿಕೆ ಹಾಕಿದ್ದಾನೆ. ಕಾನೂನು ಪದವೀಧರನಾಗಿರುವ ವ್ಯಕ್ತಿ, ಪತ್ನಿಯಿಂದ ದೂರವಾದ ಬಳಿಕ ಮಾನಸಿಕವಾಗಿ ಸಮಸ್ಯೆಯಲ್ಲಿದ್ದಾನೆ. 

ತನಿಖೆಯ ಸಮಯದಲ್ಲಿ, ಆ ವ್ಯಕ್ತಿ ಪೊಲೀಸರನ್ನು ದಾರಿ ತಪ್ಪಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅವರ ಬಳಿ ನಕಲಿ ಗುರುತಿನ ಚೀಟಿಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಅವರನ್ನು ಮತ್ತಷ್ಟು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆದರಿಕೆ ಬಗ್ಗೆ ಗಾಜಿಯಾಬಾದ್ ಪೊಲೀಸರಿಂದ ಎಚ್ಚರಿಕೆ ಪಡೆದ ನಂತರ ಜೂನ್ 6 ರಂದು ದೆಹಲಿ ಪೊಲೀಸರು ತನಿಖೆ ಆರಂಭಿಸಿದರು. ಜೂನ್ 5 ರ ತಡರಾತ್ರಿ, ಗಾಜಿಯಾಬಾದ್ ಪೊಲೀಸರಿಗೆ ದೆಹಲಿ ಮುಖ್ಯಮಂತ್ರಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿತ್ತು ಎಂದು ಅವರು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೊನ್ನಾಳಿ ಪಟ್ಟಣದಲ್ಲಿ ರಸ್ತೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ರೇಣುಕಾಚಾರ್ಯ

ನಾಗರಹಾವಿನಂತಿರುವ ನಕ್ಸಲಿಸಂ ಪದೇ ಪದೇ ಹೆಡೆ ಬಿಚ್ಚಿ ವಿಷ ಕಾರುತ್ತಿರುತ್ತದೆ: ಅಮಿತ್ ಶಾ

ಮನೆಯೊಳಗೆ ಇರುವಂತೆ ಮಾಡಿದ ರಾಷ್ಟ್ರ ರಾಜಧಾನಿ ವಾಯುಮಾಲಿನ್ಯ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ಮುಂದಿನ ಸುದ್ದಿ
Show comments