Publish Date: Wed, 17 Feb 2021 (09:49 IST)
Updated Date: Wed, 17 Feb 2021 (09:52 IST)
ಭೋಪಾಲ್ : ವಿವಾಹಿತ ವ್ಯಕ್ತಿಯೊಬ್ಬ 16 ವರ್ಷದ ಹುಡುಗಿಯ ಮೇಲೆ ಮಾನಭಂಗ ಎಸಗಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಆರೋಪಿ ಯಾವಾಗಲೂ ಹುಡುಗಿಯನ್ನು ಹಿಂಬಾಲಿಸಿಕೊಂಡು ಬರುತ್ತಿದ್ದ ಎನ್ನಲಾಗಿದೆ. ಆದರೆ ಹುಡುಗಿ ಕೋಚಿಂಗ್ ಕ್ಲಾಸ್ ಗೆ ಹೋಗುತ್ತಿದ್ದ ವೇಳೆ ಆಕೆಯನ್ನು ಫ್ಲಾಟ್ ಒಳಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಘಟನೆಯ ಬಗ್ಗೆ ಹುಡುಗಿ ಯಾರಿಗೂ ತಿಳಿಸಲಿಲ್ಲ. ಆದರೆ ತಾಯಿ ಆಕೆಯ ನಡವಳಿಕೆಯಲ್ಲಾದ ಬದಲಾವಣೆಯನ್ನು ಕಂಡು ವಿಚಾರಿಸಿದಾಗ ಸತ್ಯಾಂಶ ತಿಳಿದುಬಂದಿದೆ. ಈ ಬಗ್ಗೆ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.