ಜೈಲಿಗೆ ಹೋಗುವುದನ್ನು ತಪ್ಪಿಸಲು ಸಾವಿನ ನಾಟಕವಾಡಿ ಸಿಕ್ಕಿಬಿದ್ದ!

Webdunia
ಸೋಮವಾರ, 13 ಡಿಸೆಂಬರ್ 2021 (09:10 IST)
ನವದೆಹಲಿ: ಪರೋಲ್ ಮೇಲೆ ಹೊರಗೆ ಬಂದಿದ್ದ ಅಪರಾಧಿ ಮರಳಿ ಜೈಲಿಗೆ ಹೋಗುವುದನ್ನು ತಪ್ಪಿಸಲು ಸಾವಿನ ನಾಟಕವಾಡಿ ಪತ್ನಿ ಸಮೇತ ಬಂಧನಕ್ಕೊಳಗಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಸುದೇಶ್ ಕುಮಾರ್ ಎಂಬಾತ ಕೊಲೆ ಆರೋಪದಲ್ಲಿ ಜೈಲು ಪಾಲಾಗಿದ್ದ. ಕೆಲವು ದಿನಗಳ ಹಿಂದೆ ಪರೋಲ್ ಮೇಲೆ ಬಿಡುಗಡೆಯಾಗಿದ್ದ. ಆದರೆ ಮರಳಿ ಜೈಲಿಗೆ ಹೋಗುವುದನ್ನು ತಪ್ಪಿಸಲು ಪತ್ನಿಯ ಜೊತೆಗೂಡಿ ಸಾವಿನ ನಾಟಕವಾಡಿದ್ದ.

ಅದಕ್ಕಾಗಿ ತನ್ನ ಮನೆಗೆ ಕೆಲಸಕ್ಕೆ ಬಂದಿದ್ದ ನೌಕರನಿಗೆ ತನ್ನದೇ ಡ್ರೆಸ್ ತೊಡಿಸಿ ಮದ್ಯ ಕೊಡಿಸಿ ಅರೆಪ್ರಜ್ಞಾವಸ್ಥೆಯಲ್ಲಿದ್ದಾಗ ಕೊಲೆ ಮಾಡಿದ್ದ. ಬಳಿಕ ಆತನ ಶವದ ಮುಖವನ್ನು ಸುಟ್ಟಿ ಆತನ ಜೇಬಿನಲ್ಲಿ ತನ್ನ ಐಡೆಂಟಿಟಿ ಕಾರ್ಡ್ ಇಟ್ಟು ತಾನೇ ಸಾವನ್ನಪ್ಪಿದಂತೆ ಕತೆ ಸೃಷ್ಟಿಸಿದ್ದ.

ಪೊಲೀಸರು ಮೃತದೇಹ ಗುರುತು ಹಚ್ಚಲು ಪತ್ನಿಗೆ ಹೇಳಿದಾಗ ಆಕೆ ನೀಡಿದ ಹೇಳಿಕೆ ಸಂಶಯಕ್ಕೀಡು ಮಾಡಿತ್ತು. ಹೀಗಾಗಿ ತನಿಖೆ ನಡೆಸಿದಾಗ ಗಂಡ-ಹೆಂಡಿರ ನಾಟಕ ಬಯಲಾಯ್ತು. ಇದೀಗ ಇಬ್ಬರನ್ನೂ ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಮುಂದಿನ ಸುದ್ದಿ
Show comments