Select Your Language

Notifications

webdunia
webdunia
webdunia
webdunia

ಮಗುವಿಗೆ ಜನ್ಮ ನೀಡಿದ ಬಾಲಕಿ

Man
ಕಂಕೇರ್ , ಬುಧವಾರ, 21 ಸೆಪ್ಟಂಬರ್ 2016 (09:26 IST)
ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿ ಗರ್ಭಿಣಿಯಾಗಿಸಿದ ಆರೋಪದ ಮೇಲೆ 25 ವರ್ಷದ ಯುವಕನನ್ನು ಬಂಧಿಸಲಾಗಿದೆ. ಛತ್ತೀಸ್‌ಗಢದಲ್ಲಿ ಈ ಹೇಯ ಘಟನೆ ನಡೆದಿದೆ.

ಕಂಕೇರ್‌ನಲ್ಲಿರುವ ಮದರಸಾದಲ್ಲಿ ವ್ಯಾಸಂಗ ಮಾಡುತ್ತಿದ್ದ 14 ವರ್ಷದ ಬಾಲಕಿ ಕಳೆದ ವಾರ ಮಗುವಿಗೆ ಜನ್ಮ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. 
 
ಪೀಡಿತೆ ನೀಡಿರುವ ದೂರಿನ ಆಧಾರದ ಮೇಲೆ ಆರೋಪಿ ಆಬಾದ್ ಫರೂಕಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆಯನ್ನು ಕೈಗೊಂಡಿದ್ದಾರೆ.  
 
ಮಗುವಿಗೆ ಜನ್ಮ ನೀಡಿದ ಬಳಿಕ ಅದನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಲು ಯತ್ನಿಸಿದ ಬಾಲಕಿ ಮದರಸಾದ ನಿರ್ದೇಶಕರ ಕೈಯ್ಯಲ್ಲಿ ಸಿಕ್ಕಿಹಾಕಿಕೊಂಡಿದ್ದಾಳೆ. ಬಳಿಕ ನಿರ್ದೇಶಕರೇ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ. 
 
ಕಂಕೇರ್ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಬಳಿಕ ಅದನ್ನು ರೈಪುರದ ಕೋಟ್ವಾಲಿ ಪೊಲೀಸರ್ ಠಾಣೆಗೆ ವರ್ಗಾಯಿಸಿದ್ದಾರೆ. 
 
ಆಗಸ್ಟ್ 20 2015ರಿಂದ - 28 ಆಗಸ್ಟ್ 2015ರವರೆಗೆ ಆರೋಪಿ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿದು ಬಂದಿದೆ. ಈ ಕುರಿತು ಯಾರಿಗಾದರೂ ಹೇಳಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದಾತ ಬೆದರಿಸಿದ್ದ ಎಂದು ಬಾಲಕಿ ಪೊಲೀಸ್ ವಿಚಾರಣೆ ಸಂದರ್ಭದಲ್ಲಿ ಬಾಯ್ಬಿಟ್ಟಿದ್ದಾಳೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

Share this Story:

Follow Webdunia kannada

ಮುಂದಿನ ಸುದ್ದಿ

ಶಾಲಾ ಬಸ್ ಉರುಳಿ 7 ಮಕ್ಕಳ ಸಾವು