Publish Date: Mon, 23 Oct 2017 (18:42 IST)
Updated Date: Mon, 23 Oct 2017 (18:45 IST)
15 ವರ್ಷ ವಯಸ್ಸಿನ ಮಲಮಗಳ ಮೇಲೆ ಅತ್ಯಾಚಾರವೆಸಗಿದ ಘಟನೆ ಮಧ್ಯಪ್ರದೇಶದ ವಾಣಿಜ್ಯ ರಾಜಧಾನಿಯಲ್ಲಿ ನಡೆದಿದೆ. ಅತ್ಯಾಚಾರ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅತ್ಯಾಚಾರಕ್ಕೊಳಗಾದ ಬಾಲಕಿ ತನ್ನ ನೆರೆಹೊರೆಯವರೊಂದಿಗೆ ಪೊಲೀಸ್ ಠಾಣೆಗೆ ಆಗಮಿಸಿ ಆರೋಪಿ 29 ವರ್ಷ ವಯಸ್ಸಿನ ಮಲತಂದೆ ಲಲಿತ್ ವಿರುದ್ಧ ದೂರು ದಾಖಲಿಸಿದ್ದಾಳೆ.
ಬಾಲಕಿಯ ತಾಯಿ ಉದ್ಯೋಗದ ನಿಮಿತ್ಯ ಹೊರಹೋದಾಗಲೆಲ್ಲಾ ಆರೋಪಿ ಲಲಿತ್ ಹಲವಾರು ಬಾರಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಆದರೆ, ಕೊನೆಗೆ ಆತನ ಕಾಟ ಹೆಚ್ಚಾದಾಗ ಬಾಲಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ,
ಆರೋಪಿ ಲಲಿತ್ ವಿರುದ್ಧ ದೂರು ದಾಖಲಿಸಿಕೊಂಡ ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.