ನೃತ್ಯ ಮಾಡಲು ನಿರಾಕರಿಸಿದ್ದಕ್ಕೆ ಕೊಲೆ

Webdunia
ಬುಧವಾರ, 15 ಫೆಬ್ರವರಿ 2017 (15:21 IST)
ಸಮಾಜ ಎಷ್ಟರ ಮಟ್ಟಿಗೆ ಕೆಟ್ಟು ಹೋಗಿದೆ ಎಂದರೆ ಕೊಲೆಯಂತಹ ಅಪರಾಧಗಳನ್ನು ಎಸಗಲು ಕಾರಣವೇ ಬೇಕಿಲ್ಲ. ಅದಕ್ಕೊಂದು ಉತ್ತಮ ಉದಾಹರಣೆ ಮುಂಬೈನಲ್ಲಿ ನಡೆದ ಈ ಹೇಯ ಕೃತ್ಯ.

ಜನ್ಮದಿನದ ನಿಮಿತ್ತ ಆಯೋಜಿಸಲಾಗಿದ್ದ ಪಾರ್ಟಿಯಲ್ಲಿ ನೃತ್ಯ ಮಾಡಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಗೆಳೆಯನನ್ನು ಹತ್ಯೆಗೈದ ಅಮಾನುಷ ಘಟನೆ ಮುಂಬೈನಲ್ಲಿ ನಡೆದಿದೆ. 
 
ನಿನ್ನೆ ರಾತ್ರಿ ಈ ಕೃತ್ಯ ನಡೆದಿದ್ದು ಮೃತನನ್ನು ಅಂಕುಶ್ ಜಾಧವ್ ಎಂದು ಗುರುತಿಸಲಾಗಿದೆ.
 
ಮೃತ ಅಂಕುಶ್ ಮತ್ತು ಆತನ ಸ್ನೇಹಿತ ಕೇತನ್ ಶಿರವಾಡ್ಕರ್ ತಮ್ಮ ಕಾಮನ್ ಫ್ರೆಂಡ್ ಹುಟ್ಟುಹಬ್ಬದ ನಿಮಿತ್ತ ಸಬ್ ಅರ್ಬನ್ ಅಂಧೇರಿಯಲ್ಲಿರುವ ಆತನ ಮನೆಗೆ ಹೋಗಿದ್ದರು. ಪಾರ್ಟಿ ನಡೆಯುತ್ತಿದ್ದಾಗ ಕೇತನ್, ಅಂಕುಶ್ ಬಳಿ ನೃತ್ಯ ಮಾಡುವಂತೆ ಹೇಳಿದ್ದಾನೆ. ಆದರಾತ ನಿರಾಕರಿಸಿದ್ದಾನೆ. ಇಬ್ಬರು ಕುಡಿದ ಮತ್ತಿನಲ್ಲಿದ್ದರಿಂದ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಬಳಿಕ ಇಬ್ಬರು ಕೈ ಮಿಲಾಯಿಸಿಕೊಂಡು ಹೊಡೆದಾಡಿದ್ದಾರೆ. 
 
ಪಾರ್ಟಿಯಲ್ಲಿದ್ದ ಇತರರು ಅವರನ್ನು ಬೇರ್ಪಡಿಸಲು ಪ್ರಯತ್ನಿಸಿದರಾದರೂ, ಕುಡಿದ ಮತ್ತಿನಲ್ಲಿದ್ದ ಕೇತನ್ ಅಲ್ಲೇ ಇದ್ದ ಮರದ ಹಲಗೆಯಿಂದ ಅಂಕುಶ್ ತಲೆಗೆ ಹೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡ ಅಂಕುಶ್‌ನನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಯಿತಾದರೂ ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. 
 
ಕೊಲೆ ಆರೋಪಿ ವಿರುದ್ಧ ಐಪಿಸಿ ವಿಭಾಗ 302ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments