ಕೋತಿಗಳು ಮಾಡಿದ ಕೆಲಸಕ್ಕೆ ವ್ಯಕ್ತಿ ಬಲಿ

Webdunia
ಭಾನುವಾರ, 21 ಅಕ್ಟೋಬರ್ 2018 (08:58 IST)
ಉತ್ತರ ಪ್ರದೇಶ : ಕಟ್ಟಿಗೆ ಸಂಗ್ರಹಿಸುತ್ತಿದ್ದ ವ್ಯಕ್ತಿಯ ಮೇಲೆ ಕೋತಿಗಳು ಇಟ್ಟಿಗೆ ಕಲ್ಲು ಎಸೆದು ದಾಳಿ ಮಾಡಿದ  ಪರಿಣಾಮ ಆತ  ಸಾವನಪ್ಪಿದ ಘಟನೆ ಉತ್ತರ ಪ್ರದೇಶದ ಬಾಘಪತ್‍ ನ ಟಿಕ್ರಿ ಪ್ರದೇಶದಲ್ಲಿ ನಡೆದಿದೆ.


ಧರ್ಮಪಾಲ್ ಸಿಂಗ್(72) ಕೋತಿಗಳ ದಾಳಿಗೆ ಬಲಿಯಾದ ವ್ಯಕ್ತಿ. ಈತ ಒಣ ಕಟ್ಟಿಗೆಯ ತುಂಡುಗಳನ್ನು ಸಂಗ್ರಹಿಸುತ್ತಿರುವಾಗ ಕೋತಿಗಳು  ಆತನ  ಮೇಲೆ ಸುಮಾರು 20 ಇಟ್ಟಿಗೆಯ ತುಂಡುಗಳನ್ನು ಎಸೆದಿವೆ. ಅವುಗಳು ಎಸೆದ ರಭಸಕ್ಕೆ ಧರ್ಮಪಾಲ್ ಸಿಂಗ್ ನ ತಲೆ ಮತ್ತು ಎದೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು,  ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.


ಈ ಘಟನೆ ಕುರಿತು ಧರ್ಮಪಾಲ್ ಸಿಂಗ್ ಅವರ ಕುಟುಂಬಸ್ಥರು ಕೋತಿಗಳ ಮೇಲೆ ದೂರು ದಾಖಲಿಸಲು ಪೊಲೀಸ್ ಠಾಣೆಗೆ ಬಂದಾಗ ಇದು ಅಪಹಾಸ್ಯಕ್ಕೆ ದಾರಿ ಮಾಡಿ ಕೊಡುತ್ತದೆ ಎಂದು ಪೊಲೀಸರು ಅದನ್ನು ಆಕಸ್ಮಿಕ ಘಟನೆ ಎಂದು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.


ಈಗಾಗಲೇ ಕೋತಿಗಳ ಹಾವಳಿಯಿಂದ ಕಂಗೆಟ್ಟ ಕುಟುಂಬಸ್ಥರು ಪೊಲೀಸರ ವರ್ತನೆಯಿಂದ ಕೋಪಗೊಂಡು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆಯಲು ನಿರ್ಧರಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments