Publish Date: Thu, 31 Mar 2022 (11:48 IST)
Updated Date: Thu, 31 Mar 2022 (09:15 IST)
ಕಾನ್ಪುರ: ಹಾಡು ಹಗಲೇ ನಡು ರಸ್ತೆಯಲ್ಲಿ ವ್ಯಕ್ತಿಯೊಬ್ಬರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ರಸ್ತೆಯಲ್ಲಿ ಹೋಗುತ್ತಿದ್ದ ಸಂತ್ರಸ್ತನ ಮೇಲೆ ಏಕಾಏಕಿ ವ್ಯಕ್ತಿಯೊಬ್ಬ ದಾಳಿ ನಡೆಸಿದ್ದಾನೆ. ಪರಿಣಾಮ ಸಂತ್ರಸ್ತ ರಕ್ತದ ಮಡುವಿನಲ್ಲಿ ಬಿದ್ದು ಪ್ರಾಣ ಬಿಟ್ಟಿದ್ದಾನೆ.
ತಕ್ಷಣವೇ ಸ್ಥಳೀಯರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು, ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಇದೀಗ ಕೊಲೆಗೆ ನಿಖರ ಕಾರಣವೇನೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.