ಅನೈತಿಕ ಸಂಬಂಧ: ವಿವಾಹಿತ ಪುತ್ರಿಯನ್ನು ಕತ್ತು ಹಿಸುಕಿ ಕೊಂದ ತಂದೆ

Webdunia
ಶುಕ್ರವಾರ, 14 ಜುಲೈ 2017 (16:26 IST)
ಶಂಕಿತ ಮರ್ಯಾದೆ ಹತ್ಯೆ ಪ್ರಕರಣವೊಂದರಲ್ಲಿ, ಕಳೆದ ವರ್ಷ ಪತಿಯನ್ನು ತೊರೆದು ಮತ್ತೊಬ್ಬ ವ್ಯಕ್ತಿಯೊಂದಿಗೆ ಪುತ್ರಿ ಓಡಿಹೋಗಿರುವುದನ್ನು ಸಹಿಸಿದ ತಂದೆ, ಇಂದು ಆಕೆಯ ಕತ್ತುಹಿಸುಕಿ ಹತ್ಯೆ ಮಾಡಿದ ಘಟನೆ ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ ನಡೆದಿದೆ.
 
ಹತ್ಯೆಯಾದ 25 ವರ್ಷ ವಯಸ್ಸಿನ ಚೈನಾ ಕನ್ವರ್, ದೇವೇಂದ್ರ ಸಿಂಗ್‌ರನ್ನು ಏಪ್ರಿಲ್ 2016 ರಲ್ಲಿ ವಿವಾಹವಾಗಿದ್ದರು. ಆದರೆ, ವಿವಾಹವಾದ ಐದು ತಿಂಗಳಿನ ನಂತರ, ಅನೈತಿಕ ಸಂಬಂಧದಿಂದಾಗಿ ತನ್ನ ಪ್ರೇಮಿಯೊಂದಿಗೆ ಓಡಿಹೋಗಿದ್ದಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಕಳೆದ ಕೆಲವು ತಿಂಗಳುಗಳ ಕಾಲ ಚೈನಾ ತನ್ನ ಪ್ರೇಮಿಯೊಂದಿಗೆ ಅಜ್ಞಾತ ಸ್ಥಳದಲ್ಲಿ ವಾಸಿಸುತ್ತಿದ್ದಳು. ಪುತ್ರಿ ಚೈನಾ ರನೌಲಿ ಬಸ್‌ನಿಲ್ದಾಣದ್ಲಲಿರುವುದನ್ನು ಆಕೆಯ ತಂದೆ ಭಂವರ್ ಸಿಂಗ್ ಪತ್ತೆ ಮಾಡಿದ್ದಾನೆ. ನಂತರ ಆಕೆಯನ್ನು ಸಮೇರ್ ಗ್ರಾಮದಲ್ಲಿರುವ ನಿರ್ಜನ ಮನೆಯೊಂದಕ್ಕೆ ಕರೆದುಕೊಂಡು ಹೋಗಿ ಕತ್ತುಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ಹೆಚ್ಚುವರಿ ಎಸ್ಪಿ ತೇಜ್‌ರಾಜ್ ಸಿಂಗ್ ತಿಳಿಸಿದ್ದಾರೆ.
 
ಗ್ರಾಮಸ್ಥರು ಹತ್ಯೆಯ ಬಗ್ಗೆ ಮಾಹಿತಿ ನೀಡಿದಾಗ ಘಟನಾ ಸ್ಥಳಕ್ಕೆ ಬಂದ ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆರೋಪಿ ತಂದೆಯನ್ನು ಇಲ್ಲಿಯವರೆಗೆ ಬಂಧಿಸಲಾಗಿಲ್ಲ. ತನಿಖೆ ಮುಂದುವರಿದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments