Webdunia - Bharat's app for daily news and videos

Install App

ಪತ್ನಿಯ ಜತೆ ಕಿತ್ತಾಡಿದ ನಂತರ 3 ವರ್ಷದ ಪುತ್ರಿಗೆ ಈ ತಂದೆ ಮಾಡಿದ್ದು ಕೇಳಿದರೆ ಬೆಚ್ಚಿ ಬೀಳುವಿರಿ!

Webdunia
ಶನಿವಾರ, 1 ಡಿಸೆಂಬರ್ 2018 (10:41 IST)
ನವದೆಹಲಿ: ಕುಡಿದ ಮತ್ತಿನಲ್ಲಿ ಪತ್ನಿಯ ಜತೆ ಕಿತ್ತಾಡಿದ ವ್ಯಕ್ತಿ ತನ್ನ ಮೂರು ವರ್ಷದ ಮುಗ್ಧ ಹೆಣ್ಣು ಮಗುವಿನ ಮೇಲೆ ಅತ್ಯಾಚಾರವಸೆಗಿ ಸೇಡು ತೀರಿಸಿಕೊಂಡ ಘಟನೆ ಗುರುಗಾಂವ್ ನಲ್ಲಿ ನಡೆದಿದೆ.


ಮಿನಿ ಟ್ರಕ್ ಚಾಲಕನಾಗಿದ್ದ 30 ವರ್ಷದ ವ್ಯಕ್ತಿ ಕುಡಿದ ಮತ್ತಿನಲ್ಲಿ ಪತ್ನಿ ಜತೆ ರಾತ್ರಿ ಮನೆಗೆ ಬಂದು ಜಗಳವಾಡಿದ್ದ. ಇದೇ ಬೇಸರದಲ್ಲಿ ಪತ್ನಿ ತನ್ನ ಒಂದು ವರ್ಷದ ಮಗಳ ಜತೆ ಸಂಬಂಧಿಕರ ಮನೆಗೆ ತೆರಳಿದ್ದಳು. ಈ ವೇಳೆ 3 ವರ್ಷದ ಹಿರಿಯ ಮಗಳು ಮನೆಯಲ್ಲೇ ನಿದ್ರಿಸುತ್ತಿದ್ದಳು ಎನ್ನಲಾಗಿದೆ.

ಪತ್ನಿ ಮನೆ ಬಿಟ್ಟ ಬಳಿಕ ಆರೋಪಿ ತನ್ನ ಪುಟ್ಟ ಮಗುವಿನ ಮೇಲೆ ಅತ್ಯಾಚಾರ ನಡೆಸಿ ಪರಾರಿಯಾಗಿದ್ದಾನೆ. ಬೆಳಿಗ್ಗೆ ಮನೆಗೆ ಬಂದು ಪತ್ನಿಗೆ ರಕ್ತದ ಮಡುವಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗಳನ್ನು ಕಂಡು ಗಾಬರಿಯಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ ಆಕೆ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾಳೆ. ಈ ವೇಳೆ ಅತ್ಯಾಚಾರ ನಡೆದಿರುವುದು ಸ್ಪಷ್ಟವಾಗಿದೆ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆಸ್ಪತ್ರೆಯಲ್ಲಿರುವ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments