Publish Date: Thu, 03 Feb 2022 (11:09 IST)
Updated Date: Thu, 03 Feb 2022 (09:11 IST)
ಮುಂಬೈ: ಹೆತ್ತ ತಾಯಿಯ ಮೇಲೆ ಅತ್ಯಾಚಾರ ನಡೆಸಿದ ಪಾಪಿ ಮಗನಿಗೆ ಮಹಾರಾಷ್ಟ್ರದ ಜಿಲ್ಲಾ ಕೋರ್ಟ್ ಒಂದು ಜೀವಾವಧಿ ಶಿಕ್ಷೆ ವಿಧಿಸಿದೆ.
ಕಳೆದ ವರ್ಷ ಆಗಸ್ಟ್ ನಲ್ಲಿ ಆರೋಪಿ ತಾಯಿಗೆ ಮತ್ತು ಬರಿಸುವ ಔಷಧ ನೀಡಿ ಅತ್ಯಾಚಾರವೆಸಗಿದ್ದ. ಈ ಪ್ರಕರಣದಲ್ಲಿ ಆರೋಪ ಸಾಬೀತಾದ ಬಳಿಕ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಜೊತೆಗೆ 2,000 ರೂ. ದಂಡ ಹಾಗೂ ಸಂತ್ರಸ್ತೆಗೆ 2 ಲಕ್ಷ ರೂ.ಗಳ ಪರಿಹಾರ ನೀಡಲು ಆದೇಶಿಸಿದೆ.