Publish Date: Thu, 24 Dec 2020 (06:36 IST)
Updated Date: Thu, 24 Dec 2020 (06:38 IST)
ಲಕ್ನೋ : ಉತ್ತರಪ್ರದೇಶದ ಫರುಖಾಬಾದ್ ನಲ್ಲಿ 6 ವರ್ಷದ ಬಾಲಕಿಯ ಮೇಲೆ ಮಾನಭಂಗ ಎಸಗಿ ಕೊಲೆ ಮಾಡಿದ ವ್ಯಕ್ತಿಗೆ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ.
ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿಗೆ ಆಮಿಷಯೊಡ್ಡಿ ವ್ಯಕ್ತಿ ಆಕೆಯನ್ನು ಅಲ್ಲಿಂದ ಕರೆದುಕೊಂಡು ಹೋಗಿ ಮಾನಭಂಗ ಎಸಗಿ ಕೊಲೆ ಮಾಡಿದ್ದಾನೆ. ಪೋಷಕರು ಮಗು ಕಾಣೆಯಾದ ಬಗ್ಗೆ ಪ್ರಕರಣ ದಾಖಲಿಸಿದಾಗ ಪೊಲೀಸರು ಹುಡುಕಾಡಿದಾಗ ಅವಳ ಶವ ಹೊಲದಲ್ಲಿ ಪತ್ತೆಯಾಗಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಇದೀಗ ಈ ಪ್ರಕರಣದ ವಿಚಾರಣೆ ನಡೆಸಿದ ಕೊರ್ಟ್ ಆರೋಪಿಯನ್ನು ಅಪರಾಧಿಯೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿದೆ.