Publish Date: Sat, 16 Dec 2017 (11:29 IST)
Updated Date: Sat, 16 Dec 2017 (11:37 IST)
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷರಾಗಿ ಸೋನಿಯಾ ಗಾಂಧಿಯವರಿಂದ ರಾಹುಲ್ ಗಾಂಧಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನವದೆಹಲಿಯಲ್ಲಿ ನಡೆಯುತ್ತಿದ್ದು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೋನಿಯಾ, ರಾಹುಲ್ ಗುಣಗಾನ ಮಾಡಿದ್ದಾರೆ.
ರಾಹುಲ್ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಮನಮೋಹನ್ ಸಿಂಗ್, 19 ವರ್ಷಗಳ ಕಾಲ ಸೋನಿಯಾ ಗಾಂಧಿ ಕಾಂಗ್ರೆಸ್ ನ್ನು ಸಮರ್ಥವಾಗಿ ಮುನ್ನಡೆಸಿದರು. ನಾನು ಪ್ರಧಾನ ಮಂತ್ರಿಯಾಗಿ 10 ವರ್ಷ ಆಡಳಿತ ಮಾಡಿದ ಸಂದರ್ಭದಲ್ಲಿ ಕಾಲ ಕಾಲಕ್ಕೆ ತಕ್ಕಂತೆ ಸಲಹೆ ಸೂಚನೆ ನೀಡುತ್ತಾ ನಮಗೆ ಸ್ಪೂರ್ತಿಯಾಗಿದ್ದರು ಎಂದು ಹೊಗಳಿಕೆ ನೀಡಿದರು.
ಇನ್ನೊಂದೆಡೆ ರಾಹುಲ್ ಗಾಂಧಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದರಲ್ಲದೆ, ರಾಹುಲ್ ದೇಶಾದ್ಯಂತ ಸುತ್ತಾಡಿದ್ದಾರೆ. ಅವರಿಗೆ ದೇಶದ ಸಮಸ್ಯೆ ಬಗ್ಗೆ ಚೆನ್ನಾಗಿ ಅರಿವಿದೆ. ಅವರಷ್ಟು ತಿಳಿದವರಿಲ್ಲ ಎಂದು ಗುಣಗಾನ ಮಾಡಿದರು.
ರಾಹುಲ್ ಪದಗ್ರಹಣ ಸಂದರ್ಭದಲ್ಲಿ ನಿರ್ಗಮಿತ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಸೇರಿದಂತೆ ಕಾಂಗ್ರೆಸ್ ನ ಬಹುತೇಕ ನಾಯಕರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ