Publish Date: Wed, 28 Nov 2018 (10:02 IST)
Updated Date: Wed, 28 Nov 2018 (10:04 IST)
ನವದೆಹಲಿ: ಸಂಸದೀಯ ವ್ಯವಹಾರಗಳ ಸಮಿತಿಯ ಸದಸ್ಯರಾಗಿರುವ ಕರ್ನಾಟಕದ ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯಿಲಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕ್ಲಾಸ್ ತೆಗೆದುಕೊಂಡಿದ್ದಾರೆ!
ಸಂಸದೀಯ ವ್ಯವಹಾರಗಳ ಸಮಿತಿಯ ಮಾಹಿತಿಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಕಟಿಸಿ ನಿಯಮ ಮೀರಿದ ವೀರಪ್ಪ ಮೊಯಿಲಿ ಬಗ್ಗೆ ಮನಮೋಹನ್ ಸಿಂಗ್ ಪ್ರತಿಕ್ರಿಯಿಸಿದ್ದು, ಎಲ್ಲರೂ ನಿಯಮ ಪಾಲಿಸಬೇಕೆಂದು ಪಾಠ ಹೇಳಿದ್ದಾರೆ.
ಇದಕ್ಕೂ ಮೊದಲು ಬಿಜೆಪಿಯ ಸಂಸದ ನಿಶಿಕಾಂತ್ ದುಬೆ ಈ ವಿಚಾರವಾಗಿ ವೀರಪ್ಪ ಮೊಯಿಲಿ ವಿರುದ್ಧ ಸಂಸತ್ತಿನಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಲು ಸ್ಪೀಕರ್ ಸುಮಿತ್ರಾ ಮಹಾಜನ್ ಬಳಿ ಅವಕಾಶ ಕೇಳಿ ಪತ್ರ ಬರೆದಿದ್ದರು. ಅದರ ಬೆನ್ನಲ್ಲೇ ಮನಮೋಹನ್ ಸಿಂಗ್ ಈ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ಒಂದು ಸಮಿತಿಯ ನಿಯಮಗಳನ್ನು ಕಾಪಾಡಿಕೊಳ್ಳಬೇಕಾಗಿರುವುದು ಆಯಾ ಸದಸ್ಯರ ಕರ್ತವ್ಯ, ನಿಯಮ ಯಾರೂ ಮುರಿಯುವಂತಿಲ್ಲ ಎಂದು ಮನಮೋಹನ್ ಸಿಂಗ್ ಕಾರ್ಯಕ್ರಮವೊಂದರಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.