Select Your Language

Notifications

webdunia
webdunia
webdunia
webdunia

ಮಣಿಪುರ ಹಿಂಸಾಚಾರ ಪ್ರಕರಣ: ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಿದ ಕೇಂದ್ರ

Manipur violence case

Sampriya

ನವದೆಹಲಿ , ಸೋಮವಾರ, 18 ನವೆಂಬರ್ 2024 (14:28 IST)
Photo Courtesy X
ನವದೆಹಲಿ: ಮಣಿಪುರದ ಹಿಂಸಾಚಾರ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ.

ಮಣಿಪುರದ ಜೀವಹಾನಿ ಮತ್ತು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಲು ಕಾರಣವಾದ ಮೂರು ಹಿಂಸಾಚಾರ ಪ್ರಕರಣಗಳ ತನಿಖೆಯನ್ನು ವಹಿಸಿಕೊಂಡಿರುವ ಎನ್‌ಐಎ ತಂಡವು, ಪೊಲೀಸರಿಂದ ಮಾಹಿತಿ ಕಲೆಹಾಕುತ್ತಿದೆ.

ಹಿಂಸಾಚಾರ ತೀವ್ರಗೊಂಡ ಬೆನ್ನಲ್ಲೇ ಮಣಿಪುರದ ಮುಖ್ಯಮಂತ್ರಿ ಎನ್‌. ಬಿರೇನ್‌ ಸಿಂಗ್‌ ಅವರು ಇಂದು ಸಂಜೆ 6 ಗಂಟೆಗೆ ಸರ್ವಪಕ್ಷಗಳ ತುರ್ತುಸಭೆ ಕರೆದಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಮಣಿಪುರದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಮುಖ ಸಭೆಯನ್ನು ನಡೆಸಲಿದ್ದಾರೆ. ಮಣಿಪುರದ ಅಸ್ಥಿರ ಪರಿಸ್ಥಿತಿಯನ್ನು ನಿಭಾಯಿಸಲು ಕಾರ್ಯತಂತ್ರವನ್ನು ರೂಪಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
 

Share this Story:

Follow Webdunia kannada

ಮುಂದಿನ ಸುದ್ದಿ

ರಾಷ್ಟ್ರ ರಾಜಧಾನಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ: ಶೇ 50 ಉದ್ಯೋಗಿಗಳಿಗೆ ವರ್ಕ್‌ ಫ್ರಂ ಹೋಂ