Webdunia - Bharat's app for daily news and videos

Install App

ಪಟಾಕಿ ಸಿಡಿಸುವ ವೇಳೆ ಮದುವೆ ಮಂಟಪಕ್ಕೆ ಬೆಂಕಿ: 6 ಮಂದಿ ದುರ್ಮರಣ

Sampriya
ಶುಕ್ರವಾರ, 26 ಏಪ್ರಿಲ್ 2024 (15:14 IST)
ದರ್ಭಾಂಗಾ(ಬಿಹಾರ): ಪಾಟ್ನಾದಲ್ಲಿ ನಿನ್ನೆ ಹೊಟೇಲ್‌ವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು 6 ಮಂದಿ ಸಾವನ್ನಪ್ಪಿದ್ದ ಬೆನ್ನಲ್ಲೇ ಮದುವೆ ಮಂಟಪಕ್ಕೆ ಬೆಂಕಿ ಹೊತ್ತಿಕೊಂಡು 6 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಈ ಘಟನೆ ನಡೆದಿರುವುದು ಬಿಹಾರದ ದರ್ಭಾಂಗಾ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದೆ.

ಮೃತರನ್ನು ಸುನೀಲ್ ಪಾಸ್ವಾನ್ (26), ಲೀಲಾ ದೇವಿ (23), ಕಾಂಚನ ದೇವಿ (26), ಸಿದ್ದಾಂತ್ ಕುಮಾರ್ (4), ಶಶಾಂಕ್ ಕುಮಾರ್ ( 3 ) ಮತ್ತು ಸಾಕ್ಷಿ ಕುಮಾರಿ (5) ಮೃತರು.

ಬಹೇರಾ ಪೊಲೀಸ್ ಠಾಣೆ ವ್ಯಾಪ್ತಿಯ ಅಲಿನಗರದಲ್ಲಿ ಗುರುವಾರ ರಾತ್ರಿ 11.15 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

ಪ್ರತ್ಯಕ್ಷದರ್ಶಿಯೊಬ್ಬರು ಪ್ರತಿಕ್ರಿಯಿಸಿ, ಪಟಾಕಿ ಸಿಡಿಸುವ ವೇಳೆ ಮಂಟಪಕ್ಕೆ ಬೆಂಕಿ ಹೊತ್ತಿಕೊಂಡಿದೆ. ಮಂಟಪದಲ್ಲಿ ಇರಿಸಲಾಗಿದ್ದ ಕೆಲವು ದಹನಕಾರಿ ವಸ್ತುಗಳಿಂದ ಬೆಂಕಿ ವೇಗವಾಗಿ ಹರಡಿಕೊಂಡಿದ್ದರಿಂದ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಮೂರು ಹಸುಗಳೂ ಬೆಂಕಿಗೆ ಆಹುತಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ಬಂದ ಕೂಡಲೇ ಅಗ್ನಿಶಾಮಕ ದಳಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಸದ್ಯ ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಜಗುನಾಥ ರೆಡ್ಡಿ ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ