Webdunia - Bharat's app for daily news and videos

Install App

ಗರ್ಲ್​ಫ್ರೆಂಡ್ ಜೊತೆ ಮದುವೆ: ಪ್ರಿಯಕರನ ಗುಪ್ತಾಂಗ ಕಟ್!

Webdunia
ಶನಿವಾರ, 25 ಡಿಸೆಂಬರ್ 2021 (09:21 IST)
ನವದೆಹಲಿ : ತಾನು ಪ್ರೀತಿಸಿದ ಯುವತಿಯನ್ನು ಮದುವೆಯಾದ ಎಂಬ ಒಂದೇ ಕಾರಣಕ್ಕೆ ಯುವಕನನ್ನು ಥಳಿಸಿ, ಆತನ ಗುಪ್ತಾಂಗವನ್ನು ಕಟ್ ಮಾಡಲಾಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಘಟನೆ ನಡೆದಿದೆ. ಯುವತಿಯನ್ನು ಮದುವೆಯಾಗಿ, ಓಡಿಹೋದ ಯುವಕನನ್ನು ಅಪಹರಿಸಿದ ಯುವತಿಯ ಕುಟುಂಬಸ್ಥರು ಥಳಿಸಿ, ಆತನ ಗುಪ್ತಾಂಗವನ್ನು ಕತ್ತರಿಸಿದ್ದಾರೆ.

ಡಿಸೆಂಬರ್ 22ರಂದು ದೆಹಲಿಯ ರಜೌರಿ ಗಾರ್ಡನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕೊಲೆ ಯತ್ನ ಮತ್ತು ಅಪಹರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಡಿಸಿಪಿ (ಪಶ್ಚಿಮ) ಪ್ರಶಾಂತ್ ಗೌತಮ್ ತಿಳಿಸಿದ್ದಾರೆ. ಹಲ್ಲೆಗೊಳಗಾದ 22 ವರ್ಷದ ಯುವಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದ್ದು, ಆತನನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆ ಯುವಕ ಮತ್ತು ಯುವತಿ ಬಹಳ ದಿನಗಳಿಂದ ಪ್ರೀತಿ ಮಾಡುತ್ತಿದ್ದರು. ಮನೆಯವರು ಅವರ ಪ್ರೀತಿಗೆ ಒಪ್ಪದ ಕಾರಣದಿಂದ ದೆಹಲಿಯ ಹೊರಗೆ ಹೋಗಿ ಗುಟ್ಟಾಗಿ ಮದುವೆಯಾಗಿದ್ದರು. ಇದು ಯುವತಿಯ ಮನೆಯವರನ್ನು ಕೆರಳಿಸಿತ್ತು. ಅವರಿಬ್ಬರೂ ಮದುವೆಯಾದ ನಂತರ ಡಿಸೆಂಬರ್ 22ರಂದು ದೆಹಲಿಗೆ ಮರಳಿದ್ದರು. ಅವರ ಕುಟುಂಬಗಳಿಂದ ಅಪಾಯವಿರುವುದರಿಂದ ರಕ್ಷಣೆ ಬೇಕೆಂದು ಪೊಲೀಸರನ್ನು ಕೋರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ