ಮುಂಬೈ : ಇಂದಿನಿಂದ ಮಾಸ್ಕ್ ಧರಿಸದಿದ್ದರೆ ಯಾವುದೇ ದಂಡವನ್ನು ವಿಧಿಸಲಾಗುವುದಿಲ್ಲ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಘೋಷಿಸಿದೆ.
ಆದರೂ ಸೋಂಕು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರದ ಹಿನ್ನೆಲೆ ನಾಗರಿಕರು ಮಾಸ್ಕ್ ಧರಿಸುವುದು ಉತ್ತಮ ಎಂದು ತಿಳಿಸಿದೆ.
ಪ್ರಸ್ತುತ ಕೊರೊನಾ ವೈರಸ್ ಸೋಂಕಿನ ಹರಡುವಿಕೆ ನಿಯಂತ್ರಣದಲ್ಲಿರುವುದರಿಂದ, ವಿಧಿಸಲಾಗಿದ್ದ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ. ಆದರೆ ವಿಶ್ವಾದ್ಯಂತ ಸೋಂಕು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಹಾಗಾಗಿ ಕೊರೊನಾ ಭೀತಿ ಹಾಗೆಯೇ ಇದೆ.
ಕೋವಿಡ್-19 ನಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ನಾಗರಿಕರು ಸ್ವಯಂಪ್ರೇರಣೆಯಿಂದ ಮಾಸ್ಕ್ಗಳನ್ನು ಧರಿಸಬೇಕು ಬಿಎಂಸಿ ಆಡಳಿತ ಮುನ್ನೆಚ್ಚರಿಕೆ ನೀಡುವ ಮೂಲಕ ಜನರಿಗೆ ಮನವಿ ಮಾಡಿದೆ.