ಸಾಮೂಹಿಕ ಅತ್ಯಾಚಾರ : ಬಾಲಕಿ ಗುಪ್ತಾಂಗಕ್ಕೆ ಚೂಪಾದ ವಸ್ತು ಹಾಕಿದ ಕಾಮುಕರು!

Webdunia
ಶನಿವಾರ, 15 ಜನವರಿ 2022 (14:04 IST)
ಜೈಪುರ : ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.
 
ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳು ಆಕೆಯ ಗುಪ್ತಾಂಗಕ್ಕೆ ಚೂಪಾದ ವಸ್ತುವನ್ನು ಹಾಕಿ ಹಿಂಸೆ ಮಾಡಿ ಮೇಲ್ಸೇತುವೆಯಿಂದ ಎಸೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆ ಬಾಲಕಿ ವಿಶೇಷಚೇತನಳಾಗಿದ್ದು, ಅಲ್ವಾರ್ನ ತಿಜಾರಾ ಫ್ಲೈ ಓವರ್ನ ಕೆಳಗೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ಆಕೆಯನ್ನು ನೋಡಿ ಪೊಲೀಸರಿಗೆ ವಿಷಯ ತಿಳಿಸಲಾಗಿತ್ತು.

ತಕ್ಷಣ ಆ ಬಾಲಕಿಯನ್ನು ಅಲ್ವಾರ್ನ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ವೈದ್ಯರು ಆ ಬಾಲಕಿಯ ರಕ್ತಸ್ರಾವವನ್ನು ನಿಲ್ಲಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜೈಪುರದ ಜೆಕೆ ಲೋನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಸುಮಾರು ಎರಡೂವರೆ ಗಂಟೆಗಳ ಕಾಲ ಆಕೆಗೆ ಶಸ್ತ್ರಚಿಕಿತ್ಸೆ ನಡೆಸಿದ ನಂತರ ಆಕೆ ಅಪಾಯದಿಂದ ಪಾರಾಗಿದ್ದಾಳೆ.

“ವೈದ್ಯರು ಆಕೆಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದು, ಇದೀಗ ಆಕೆ ಅಪಾಯದಿಂದ ಪಾರಾಗಿದ್ದಾಳೆ” ಎಂದು ರಾಜಸ್ಥಾನದ ಸಚಿವ ಪರ್ಸಾದಿ ಲಾಲ್ ಮೀನಾ ತಿಳಿಸಿದ್ದಾರೆ. ಅಪ್ರಾಪ್ತ ಬಾಲಕಿಯ ದೇಹದ ಖಾಸಗಿ ಭಾಗಗಳಿಗೆ ಚೂಪಾದ ವಸ್ತುಗಳನ್ನು ಹಾಕಿ ಹಿಂಸೆ ನೀಡಲಾಗಿದೆ. ಇದರಿಂದ ಆಕೆಯ ಗುಪ್ತಾಂಗಗಳಿಗೆ ಗಂಭೀರ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಡಿನ್ನರ್ ಮೀಟಿಂಗ್ ನಡುವೆ ಸಿಎಂ, ಡಿಸಿಎಂಗೆ ದೆಹಲಿ ಬುಲಾವ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೇಡ ಅನ್ನಕ್ಕಾಯ್ತದಾ.. ಡಿನ್ನರ್ ಮೀಟಿಂಗ್ ಬಗ್ಗೆ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

ಮುಂದಿನ ಸುದ್ದಿ
Show comments