Select Your Language

Notifications

webdunia
webdunia
webdunia
webdunia

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ !

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ !
ಲಕ್ನೋ , ಗುರುವಾರ, 31 ಮಾರ್ಚ್ 2022 (16:27 IST)
ಲಕ್ನೋ : ಅಪ್ರಾಪ್ತ ದಲಿತ ಬಾಲಕಿಯೊಬ್ಬಳನ್ನು ಗ್ರಾಮದ ಸಮುದಾಯದ ಯುವಕನೊಬ್ಬ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯಲ್ಲಿ ನಡೆದಿದೆ.

ಘಟನೆ ಕುರಿತು ಬಾಲಕಿಯ ತಂದೆ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಅಪಹರಣದ ದೂರು ದಾಖಲಿಸಿದ್ದಾರೆ. ಘಟನೆಯ ಕುರಿತು ಬಾಲಕಿಯು ಮ್ಯಾಜಿಸ್ಟ್ರೆಟ್ ಮುಂದೆ ಸಂಪೂರ್ಣ ಹೇಳಿಕೆ ನೀಡಿದ್ದಾರೆ.

ತಲೆಮರೆಸಿಕೊಂಡಿದ್ದ ಹುಡುಗ ಮತ್ತು ಆತನ ಇಬ್ಬರು ಸಹಚರರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದಾಳೆ. ಹೇಳಿಕೆ ಆಧರಿಸಿ ಮೂವರು ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. ಘಟನೆಗೆ ಹಿಂದೂ ಸಂಘಟನೆಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಆರೋಪಿಗಳ ಬಂಧನಕ್ಕೆ ಹಿಂದೂ ಸಂಘಟನೆಗಳು ಮನವಿ ಪತ್ರವನ್ನೂ ಸಲ್ಲಿಸಿವೆ. ಪಹಸು ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ಲಾಸಿಕ್ ಕೊಟ್ಟರೆ ಉಚಿತ ಪ್ರಯಾಣ!