Publish Date: Mon, 19 Sep 2022 (07:05 IST)
Updated Date: Sun, 18 Sep 2022 (22:09 IST)
ತೈಪೆ : ತೈವಾನ್ನ ಆಗ್ನೇಯ ಭಾಗದಲ್ಲಿ ಭಾನುವಾರ 6.8 ತೀವ್ರತೆಯ ಭೂಕಂಪ ಸಂಭವಿಸಿದೆ. ದ್ವೀಪ ದೇಶದಲ್ಲಿ ಸಂಭವಿಸಿದ ಭಾರೀ ಭೂಕಂಪ ಸುನಾಮಿ ಎಚ್ಚರಿಕೆಯನ್ನು ಹುಟ್ಟುಹಾಕಿದೆ ಎಂದು ವರದಿಗಳು ತಿಳಿಸಿವೆ.
ಅಮೆರಿಕದ ಭೂವೈಜ್ಞಾನಿಕ ಸಂಸ್ಥೆ ತೈವಾನ್ನಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿದೆ ಹಾಗೂ 10 ಕಿ.ಮೀ(6.21 ಮೈಲಿ) ಆಳದಲ್ಲಿ ಅದರ ಕೇಂದ್ರ ಬಿಂದುವನ್ನು ಗುರುತಿಸಿದೆ.
ಭೂಕಂಪದ ಕೇಂದ್ರಬಿಂದುವಿನಿಂದ ಸುಮಾರು 300 ಕಿ.ಮೀ ಆಳದಲ್ಲಿ ಅಪಾಯಕಾರಿ ಸುನಾಮಿ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ಅಮೆರಿಕದ ಸುನಾಮಿ ಎಚ್ಚರಿಕಾ ಕೇಂದ್ರ ತಿಳಿಸಿದೆ.