Webdunia - Bharat's app for daily news and videos

Install App

ವಿಶಾಖಾ ಪಟ್ಟಣ: ಜೈವಿಕ ಡೀಸೆಲ್ ತಯಾರಿಕಾ ಘಟಕದಲ್ಲಿ ಬೆಂಕಿ ಅವಘಡ

Webdunia
ಬುಧವಾರ, 27 ಏಪ್ರಿಲ್ 2016 (10:36 IST)
ವಿಶಾಖಪಟ್ಟಣದ ದುವ್ವಡ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ನಗರದ ಹೊರವಲಯದಲ್ಲಿರುವ ಜೈವಿಕ ಡೀಸೆಲ್ ತಯಾರಿಕಾ ಘಟಕಕ್ಕೆ ಬೆಂಕಿ ಹೊತ್ತಿಕೊಂಡು 6 ತೈಲ ಟ್ಯಾಂಕ್ ಗಳು ಸ್ಫೋಟಗೊಂಡಿವೆ.

 
ವಿಶೇಷ ಆರ್ಥಿಕ ವಲಯದಲ್ಲಿರುವ ಜೈವಿಕ ತೈಲ ಉತ್ಪಾದನಾ ಘಟಕ ಬಯೋಮ್ಯಾಕ್ಸ್‌ನಲ್ಲಿ  (ಬಿಎಫ್ಎಲ್‌)ನಲ್ಲಿ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದ್ದು ಘಟಕದ ಆವರಣದಲ್ಲಿದ್ದ 11 ಇಂಧನ ಟ್ಯಾಂಕ್‌ಗಳಿಗೆ ಬೆಂಕಿ ಹತ್ತಿಕೊಂಡಿದ್ದು ಅದರಲ್ಲಿ 6 ಸ್ಫೋಟವಾಗಿ ಛಿದ್ರಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟಕದಲ್ಲಿ ಒಟ್ಟು 15 ತೈಲ ಸಂಗ್ರಹಣಾ ಟ್ಯಾಂಕ್​ಗಳಿದ್ದವು ಎಂದು ತಿಳಿದುಬಂದಿದೆ. 
 
ಘಟಕದಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ತೈಲ ಹಾಗೂ ಕಚ್ಚಾ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
 
ಘಟನೆ ನಡೆದಾಗ ಘಟಕದಲ್ಲಿ 10-15 ನೌಕರರು ಕೆಲಸ ಮಾಡುತ್ತಿದ್ದರು. ಎಲ್ಲರನ್ನೂ ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ. 
 
ಭಾರತದಲ್ಲೇ ಅತಿ ದೊಡ್ಡ  ಜೈವಿಕ ಡೀಸೆಲ್ ತಯಾರಿಕಾ ಘಟಕವಾಗಿರುವ ಬಯೋಮ್ಯಾಕ್ಸ್ ವಾರ್ಷಿಕ 5 ಲಕ್ಷ ಟನ್ ಡೀಸೆಲ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ .

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments