ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರದಲ್ಲಿ ಕನಿಷ್ಠ ನಾಲ್ಕು ಜನ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ.
ಕಾಂಗ್ರೆಸ್ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಈ ಗಲಾಟೆ ನಡೆದಿದ್ದು ಮತ್ತೆ ಮೂವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.
ಕಾಂಗ್ರೆಸ್ ನಾಯಕರು ನಮ್ಮ ಮೇಲೆ ಬಾಂಬ್ ದಾಳಿ ನಡೆಸಿದ್ದು ಪರಿಣಾಮ ನಾಲ್ವರು ಸಾವನ್ನಪ್ಪಿ ಮತ್ತೆ ಮೂವರು ಗಾಯಗೊಂಡಿದ್ದಾರೆ ಎಂದು ಟಿಎಂಸಿ ಕಾರ್ಯಕರ್ತರು ಆರೋಪಿಸಿದ್ದಾರೆ. ಆದರೆ ಈ ಆರೋಪವನ್ನು ಕಾಂಗ್ರೆಸ್ ತಳ್ಳಿ ಹಾಕಿದೆ.
ಶನಿವಾರ ಪಶ್ಚಿಮ ಬಂಗಾಳದಲ್ಲಿ ಐದನೆ ಮತ್ತು ಕೊನೆಯ ಹಂತದ ಮತದಾನ ನಡೆದಿದ್ದು 78.25% ಮತದಾನವಾಗಿದೆ.
ಮತದಾನದ ಸಮಯದಲ್ಲಿ ನಡೆದ ಅಕ್ರಮ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ 185 ಜನರನ್ನು ಬಂಧಿಸಲಾಗಿತ್ತು. ಘಟನೆಯಲ್ಲಿ 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಮೇ 19 ರಂದು ಪಶ್ಚಿ ಬಂಗಾಳ ವಿಧಾನಸಭಾ ಚುನಾವಣೆ ನಡೆಯಲಿದೆ.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.