ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

Sampriya
ಸೋಮವಾರ, 17 ನವೆಂಬರ್ 2025 (18:55 IST)
Photo Credit X
ಹೈದರಾಬಾದ್ (ತೆಲಂಗಾಣ): ಸೌದಿ ಅರೇಬಿಯಾದಲ್ಲಿ ಬಸ್ ಅಪಘಾತದಲ್ಲಿ ಸಾವನ್ನಪ್ಪಿದ 45 ಜನರ ಕುಟುಂಬಗಳಿಗೆ ತೆಲಂಗಾಣ ಸರ್ಕಾರ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ. 

ತೆಲಂಗಾಣ ಸಿಎಂಒ ಪ್ರಕಾರ, ರಾಜ್ಯ ಸಚಿವ ಸಂಪುಟವು ಸೋಮವಾರ ಸೆಕ್ರೆಟರಿಯೇಟ್‌ನಲ್ಲಿ ನಡೆದ ಸಭೆಯಲ್ಲಿ ಮೃತ ಕುಟುಂಬಗಳಿಗೆ ಪರಿಹಾರ ನೀಡಲು ಘೋಷಿಸಿತು. 

ರಾಜ್ಯ ಸರ್ಕಾರವು ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಮೊಹಮ್ಮದ್ ಅಜರುದ್ದೀನ್ ನೇತೃತ್ವದ ಸರ್ಕಾರಿ ತಂಡವನ್ನು ಸೌದಿ ಅರೇಬಿಯಾಕ್ಕೆ ನಿಯೋಜಿಸಲು ನಿರ್ಧರಿಸಿದೆ. 

ಎಐಎಂಐಎಂ ಶಾಸಕರೊಬ್ಬರು ಮತ್ತು ಅಲ್ಪಸಂಖ್ಯಾತ ಸಮುದಾಯದ ಹಿರಿಯ ಅಧಿಕಾರಿಯೂ ತಂಡದ ಭಾಗವಾಗಲಿದ್ದಾರೆ. ಪ್ರತಿ ಬಲಿಪಶುವಿನ ಕುಟುಂಬದ ಇಬ್ಬರನ್ನು ಸಹ ಸೌದಿ ಅರೇಬಿಯಾಕ್ಕೆ ಕರೆದೊಯ್ಯಲಾಗುತ್ತದೆ. ಮೃತರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರವನ್ನು ಸೌದಿ ದೇಶದಲ್ಲಿ ನಡೆಸಲಾಗುವುದು ಎಂದು ತೆಲಂಗಾಣ ಸಿಎಂಒ ತಿಳಿಸಿದೆ. 

ಸೌದಿ ಅರೇಬಿಯಾದ ಮದೀನಾ ಬಳಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಹೈದರಾಬಾದ್ ಮತ್ತು ತೆಲಂಗಾಣದ ಇತರ ಭಾಗಗಳಿಂದ ಕನಿಷ್ಠ 45 ಭಾರತೀಯ ಉಮ್ರಾ ಯಾತ್ರಿಕರು ಸಾವನ್ನಪ್ಪಿದರು.

ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸಜ್ಜನರ್, ಗುಂಪು ಮಕ್ಕಾದಿಂದ ಮದೀನಾಕ್ಕೆ ಪ್ರಯಾಣಿಸುತ್ತಿದ್ದಾಗ, ಮದೀನಾಕ್ಕೆ ಸುಮಾರು 25 ಕಿಮೀ ಮೊದಲು ಅವರ ಬಸ್ ತೈಲ ಟ್ಯಾಂಕರ್‌ಗೆ ಡಿಕ್ಕಿ ಹೊಡೆದು ನಿಮಿಷಗಳಲ್ಲಿ ವಾಹನವನ್ನು ಆವರಿಸಿತು. ದುರ್ಘಟನೆಯಲ್ಲಿ 45 ಭಾರತೀಯ ಉಮ್ರಾ ಯಾತ್ರಿಕರು ಸಾವನ್ನಪ್ಪಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments