Webdunia - Bharat's app for daily news and videos

Install App

ತಮಿಳುನಾಡು ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟು ಮೀಸಲು : ಮದ್ರಾಸ್ ಹೈಕೋರ್ಟ್

Webdunia
ಗುರುವಾರ, 7 ಏಪ್ರಿಲ್ 2022 (14:21 IST)
ಚೆನ್ನೈ : ತಮಿಳುನಾಡು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5ರಷ್ಟು ವೈದ್ಯಕೀಯ ಕೋಟಾ ಮೀಸಲಿರಿಸುವ ನಿರ್ಧಾರವನ್ನು ಮದ್ರಾಸ್ ಹೈಕೋರ್ಟ್ ಎತ್ತಿ ಹಿಡಿದಿದೆ.

ತಮಿಳುನಾಡಿನಲ್ಲಿ ಪದವಿಪೂರ್ವ ಕೋರ್ಸ್ಗಳಿಗೆ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇಕಡಾ 7.5 ಕೋಟಾವನ್ನು ಮೀಸಲಿರಿಸುವ  ಸರ್ಕಾರದ ನಿರ್ಧಾರವನ್ನು ಮದ್ರಾಸ್ ಹೈಕೋರ್ಟ್ ಎತ್ತಿಹಿಡಿದಿದೆ.

ಸರ್ಕಾರ ಘೋಷಣೆ ಮಾಡಿದ್ದ ಮೀಸಲಾತಿಯನ್ನು ಪ್ರಶ್ನಿಸಿ ಖಾಸಗಿ ಶಾಲಾ ವಿದ್ಯಾರ್ಥಿಗಳು ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳು ತಮಗೂ ಇದೇ ರೀತಿಯ ಸೌಲಭ್ಯಗಳನ್ನು ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಮುನೀಶ್ವರ್ ನಾಥ್ ಭಂಡಾರಿ ಮತ್ತು ನ್ಯಾಯಮೂರ್ತಿ ಡಿ ಭರತ ಚಕ್ರವರ್ತಿ  ನೇತೃತ್ವದ ಮೊದಲ ಪೀಠ ಈ ತೀರ್ಪು ಪ್ರಕಟಿಸಿತು.

ವೈದ್ಯಕೀಯ ಕೋರ್ಸ್ ಪ್ರವೇಶದಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ 7.5 ಮೀಸಲಾತಿಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿಯಲಾಗಿದೆ ಎಂದು ಪೀಠವು ಆದೇಶದಲ್ಲಿ ತಿಳಿಸಿದೆ. ಅಲ್ಲದೆ ಐದು ವರ್ಷಗಳಲ್ಲಿ ಮೀಸಲಾತಿ ಕೋಟಾವನ್ನು ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. 

ಅಲ್ಲದೆ ಮೀಸಲಾತಿಯನ್ನು ಪ್ರಶ್ನಿಸಿ ಮತ್ತು ಅದೇ ರೀತಿಯ ಪ್ರಯೋಜನಗಳನ್ನು ಕೋರಿ ಸಲ್ಲಿಸಲಾದ ಎಲ್ಲಾ ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bantwal Murder: ಮುಸ್ಲಿಮರ ಆಕ್ರೋಶಕ್ಕೆ ಬೆಚ್ಚಿದ ಸರ್ಕಾರ, ರಾಜ್ಯಕ್ಕೆ ಹೊಸ ಹೋಂ ಮಿನಿಸ್ಟರ್ ಬರ್ತಾರಾ

Dr HS Venkateshmurthy: ಖ್ಯಾತ ಗೀತ ಸಾಹಿತಿ ಎಚ್ಎಸ್ ವೆಂಕಟೇಶ್ ಮೂರ್ತಿ ಇನ್ನಿಲ್ಲ

Karnataka Weather: ಈ ಆರು ಜಿಲ್ಲೆಗಳ ಜನರು ಹವಾಮಾನ ವರದಿ ತಪ್ಪದೇ ಗಮನಿಸಿ

West Bengal: ಪೋಷಕರನ್ನು ಕೊಂದು ಅನಾಥಶ್ರಮದಲ್ಲಿನ ಇಬ್ಬರು ಶಿಕ್ಷಕರನ್ನು ಕೊಂದ ವ್ಯಕ್ತಿ

Liberian ಹಡಗು ದುರಂತ: ಇದೊಂದು ವಿಪತ್ತು ಎಂದ ಕೇರಳ ಸರ್ಕಾರ

ಮುಂದಿನ ಸುದ್ದಿ
Show comments