Select Your Language

Notifications

webdunia
webdunia
webdunia
webdunia

ಉಗ್ರರು ಬಳಸಿದ್ದ ಶಸ್ತ್ರಾಸ್ತ್ರಗಳು,ಔಷಧಿಗಳ ಮೇಲೆ ಪಾಕ್ ಗುರುತು

ಉಗ್ರರು ಬಳಸಿದ್ದ ಶಸ್ತ್ರಾಸ್ತ್ರಗಳು,ಔಷಧಿಗಳ ಮೇಲೆ ಪಾಕ್ ಗುರುತು
ಶ್ರೀನಗರ , ಶುಕ್ರವಾರ, 9 ಜೂನ್ 2017 (10:28 IST)
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೌಗಾಮ್ ಬಳಿ ಭಾರತೀಯ ಸೇನೆ ವಶಕ್ಕೆ ಪಡೆದುಕೊಳ್ಳಲಾದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಔಷಧಿಗಳ ಮೇಲೆ ಪಾಕಿಸ್ತಾನದ ಗುರುತುಗಳಿರುವುದು ಪತ್ತೆಯಾಗಿದೆ. 
 
ಜಮ್ಮು ಮತ್ತು ಕಾಶ್ಮೀರದಲ್ಲಿ ವಿವಿಧೆಡೆ ಸೇನಾ ಪಡೆ ಕಾರ್ಯಾಚರಣೆ ನಡೆಸಿತ್ತು. ಉರಿ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಎನ್ ಕೌಂಟರ್ ನಡೆಸಿ 5-6 ಉಗ್ರರನ್ನು ಹತ್ಯೆ ಮಾಡಿತ್ತು. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಸ್ಥಳದಲ್ಲಿ ಕಾರ್ಯಾಚರಣೆಯನ್ನು ಮತ್ತೆ ಮುಂದುವರೆಸಿದ್ದ ಸೇನಾ ಪಡೆ ಉಗ್ರರು ಬಳಸಿದ್ದ ಔಷಧಿಗಳು, ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿತ್ತು. 
 
ಉಗ್ರರು ಬಳಸಿದ್ದ ವಸ್ತುಗಳ ಮೇಲೆ ಪಾಕಿಸ್ತಾನ ರಾಷ್ಟ್ರದ ಗುರುತುಗಳಿರುವುದು ಪತ್ತೆಯಾಗಿದ್ದು, ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆಂದು ತಿಳಿದುಬಂದಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಪಾಕ್ ರಾಯಭಾರಿ ಮಾತು ಕೇಳಿ ಹೊಟ್ಟೆ ಹುಣ್ಣಾಗುವಂತೆ ನಕ್ಕ ಸಭಿಕರು!