ಪ್ರಧಾನಿ ಮೋದಿ, ಆರೆಸ್ಸೆಸ್ ನಾಯಕರ ವಿರುದ್ಧ ಫೇಸ್‌ಬುಕ್‌ನಲ್ಲಿ ಸಂದೇಶ: ಆರೋಪಿ ಆರೆಸ್ಟ್

Webdunia
ಶುಕ್ರವಾರ, 14 ಅಕ್ಟೋಬರ್ 2016 (14:57 IST)
ದಸರಾ ಹಬ್ಬದ ಸಂದರ್ಭದಲ್ಲಿ ಆರೆಸ್ಸೆಸ್ ನಾಯಕರು ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಾಕಾರಿ ಸಂದೇಶಗಳನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದ ಶಾಲಾ ಪ್ರಾಂಶುಪಾಲನನ್ನು ಪೊಲೀಸರು ಬಂಧಿಸಿದ್ದಾರೆ.
 
ಜಿಲ್ಲೆಯ ಸಾರಾಧಾನಾ ಪ್ರದೇಶದಲ್ಲಿರುವ ಖಾಸಗಿ ಶಾಲೆಯಲ್ಲಿ ಮುಖ್ಯಸ್ಥನಾಗಿರುವ ಮುದಾಸ್ಸಿರ್ ರಾಣಾ ವಿರುದ್ಧ ಕೋಮುದ್ವೇಷ ಹರಡಿಸುವ ಉದ್ದೇಶದಿಂದ ಸಂದೇಶಗಳನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಪ್ರಕರಣ ದಾಖಲಿಸಿ ಜೈಲಿಗೆ ಅಟ್ಟಲಾಗಿದೆ.
 
ಇಂದು ಬೆಳಿಗ್ಗೆ ರಾಣಾನನ್ನು ಪೊಲೀಸರು ಬಂಧಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಿದ್ದಾರೆ. ಕೋರ್ಟ್ ಆರೋಪಿಯನ್ನು ವಿಚಾರಣೆಗಾಗಿ ಪೊಲೀಸ್ ವಶಕ್ಕೆ ನೀಡಿದೆ.
 
ಆರೋಪಿ ರಾಣಾ ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಇತರ ಆರೆಸ್ಸೆಸ್ ನಾಯಕರು ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ಯೋಗ ಗುರು ಬಾಬಾ ರಾಮದೇವ್ ವಿರುದ್ಧ ಅವಹೇಳನಾಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿದ್ದನು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments