Publish Date: Wed, 02 Sep 2026 (17:17 IST)
Updated Date: Wed, 02 Sep 2026 (17:20 IST)
ಅಯೋಧ್ಯೆ (ಉತ್ತರ ಪ್ರದೇಶ): ರಾಮ ಜನ್ಮಭೂಮಿ ಮಂದಿರದ ಮೊದಲ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ನೇಮಕಾತಿಯ ಕುರಿತು ಚರ್ಚಿಸಲು ಮತ್ತು ನಿರ್ಧರಿಸಲು, ಬುಧವಾರ ಅಯೋಧ್ಯೆಯ ಶ್ರೀ ಮನಿರಾಮದಾಸ್ ಛಾವಣಿಯಲ್ಲಿ 'ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್'ನ ಸಭೆ ಆರಂಭವಾಯಿತು.
ಮಹಂತ್ ದಿನೇಂದ್ರ ದಾಸ್ ಮಹಾರಾಜ್, ಮಹಂತ್ ಕಮಲ್ ನಯನ್ ದಾಸ್ ಮತ್ತು ಖಜಾನಚಿ ಸ್ವಾಮಿ ಗೋವಿಂದ ದೇವ್ ಗಿರಿ ಜಿ ಮಹಾರಾಜ್ ಸೇರಿದಂತೆ ಟ್ರಸ್ಟ್‌ನ ಸದಸ್ಯರು ಸಭೆಗಾಗಿ ಸ್ಥಳಕ್ಕೆ ಆಗಮಿಸಿದರು.
ಈ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆಯ ವರದಿಯನ್ನು ಚರ್ಚಿಸಿ, ಟ್ರಸ್ಟ್‌ನ ಮೊದಲ ಸಿಇಒ ಹೆಸರನ್ನು ಅಂತಿಮಗೊಳಿಸುವ ನಿರೀಕ್ಷೆಯಿದೆ.
ರಾಮ ಜನ್ಮಭೂಮಿ ಮಂದಿರದ ಮೊದಲ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನು (CEO) ಆಯ್ಕೆ ಮಾಡಲು ರಚಿಸಲಾದ ಶೋಧನಾ ಸಮಿತಿಯು, 5,000ಕ್ಕೂ ಹೆಚ್ಚು ಅಭ್ಯರ್ಥಿಗಳು ಸ್ಪರ್ಧಿಸಿದ್ದ ಕಠಿಣ ಆಯ್ಕೆ ಪ್ರಕ್ರಿಯೆಯ ನಂತರ ತನ್ನ ಅಂತಿಮ ವರದಿಯನ್ನು ನಿಗದಿತ ಸಮಯಕ್ಕಿಂತ ಒಂದು ದಿನ ಮುಂಚಿತವಾಗಿಯೇ ಸಲ್ಲಿಸಿತು.
ಖಜಾಂಚಿ ಸ್ವಾಮಿ ಗೋವಿಂದ ದೇವ್‌ಗಿರಿ ಜಿ ಮಹಾರಾಜ್, ಮಹಂತ್ ದಿನೇಂದ್ರ ದಾಸ್, ಹಂಗಾಮಿ ಪ್ರಧಾನ ಕಾರ್ಯದರ್ಶಿ ಕೃಷ್ಣ ಮೋಹನ್ ಮತ್ತು ಅಯೋಧ್ಯಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಶಶಾಂಕ್ ತ್ರಿಪಾಠಿ ಸೇರಿದಂತೆ ಟ್ರಸ್ಟ್‌ನ ಸದಸ್ಯರು ಭಾಗವಹಿಸಿದ್ದ ಉನ್ನತ ಮಟ್ಟದ ಸಭೆಯಲ್ಲಿ ಈ ವರದಿಯನ್ನು ಸಲ್ಲಿಸಲಾಯಿತು.
ನಿವೃತ್ತ ಲೆಫ್ಟಿನೆಂಟ್ ಜನರಲ್ ವಿಷ್ಣು ಕಾಂತ್ ಚತುರ್ವೇದಿ, ಮಾಜಿ ವಿಜ್ಞಾನಿ ಸುರೇಶ್ ಹವಾರೆ ಮತ್ತು ಮಾಜಿ ನ್ಯಾಯಮೂರ್ತಿ ಪ್ರಮೋದ್ ಕೊಹ್ಲಿ ಅವರು ಈ ಮೂವರು ಸದಸ್ಯರ ಶೋಧನಾ ಸಮಿತಿಯಲ್ಲಿದ್ದಾರೆ. ಇದಕ್ಕೂ ಮುನ್ನ ಮಾತನಾಡಿದ ಮಹಂತ್ ಕಮಲ್ ನಯನ್ ದಾಸ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ (CEO) ನೇಮಕಾತಿಯ ಕುರಿತು ಚರ್ಚಿಸಲು 'ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್'ನ ಸಭೆ ನಡೆಯುತ್ತಿರುವುದು ಮಹತ್ವದ್ದಾಗಿದೆ, ಏಕೆಂದರೆ ಇದರಲ್ಲಿ ಹಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಿದೆ ಎಂದು ಹೇಳಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ